ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳು ಹಾಗೂ ಮೃತರ ಸಂಖ್ಯೆಯ ಜತೆಗೆ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಾಗುವವರ ಸಂಖ್ಯೆಯಲ್ಲಿ ಕೂಡ ಇಳಿಕೆ ಕಂಡಿದ್ದು, ಸದ್ಯ 824 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ರಾಜ್ಯದಾದ್ಯಂತ ಬುಧವಾರ ಒಂದೇ ದಿನ 2,881 ಮಂದಿ ಕೋವಿಡ್ ಸೋಂಕಿತರು ಗುಣಮುಖರಾಗಿದ್ದಾರೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 2,584 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 23 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 8,53,796 ಕ್ಕೆ ಏರಿಕೆಯಾಗಿದ್ದು, ಆ ಪೈಕಿ 11,453 ಮಂದಿ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದುವರೆಗೆ 8,11,581 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 30,743 ಸಕ್ರಿಯ ಪ್ರಕರಣಗಳಿವೆ.

ಇಂದು ಬೆಂಗಳೂರು ನಗರದಲ್ಲಿ 1,665, ಮೈಸೂರು 112, ದಕ್ಷಿಣ ಕನ್ನಡ 63, ಹಾಸನ 59, ಮಂಡ್ಯ 57, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 48 ಪ್ರಕರಣಗಳು ದಾಖಲಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.