ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: 1,781 ಹೊಸ ಪ್ರಕರಣ, 17 ಸೋಂಕಿತರು ಸಾವು

Last Updated 20 ನವೆಂಬರ್ 2020, 14:55 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1,781 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದ್ದು, 17 ಜನರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 8,69,561ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 11,621ಕ್ಕೆ ತಲುಪಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇಂದು ಒಟ್ಟು 2,181 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟಾರೆ 8,33,169 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 24,752 ಪ್ರಕರಣಗಳು ಸಕ್ರಿಯವಾಗಿವೆ. ಇದರಲ್ಲಿ 539 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 1,067 ಹೊಸ ಪ್ರಕರಣಗಳು ವರದಿಯಾಗಿವೆ. ಹೀಗಾಗಿ ನಗರದಲ್ಲಿ 3,61,654 ಜನರಿಗೆ ಸೋಂಕು ತಗುಲಿದಂತಾಗಿದೆ. ಇದರಲ್ಲಿ 3,39,942 ಮಂದಿ ಗುಣಮುಖರಾಗಿದ್ದಾರೆ. ಉಳಿದಂತೆ 4,048 ಸೋಂಕಿತರು ಮೃತಪಟ್ಟಿದ್ದು, ಇನ್ನೂ 17,663 ಪ್ರಕರಣಗಳು ಸಕ್ರಿಯವಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT