ಬೆಂಗಳೂರು:ಕೋವಿಡ್ ಪೀಡಿತರಲ್ಲಿ ಮತ್ತೆ 101 ಮಂದಿ ಮೃತಪಟ್ಟಿರುವುದು ಭಾನುವಾರ ದೃಢಪಟ್ಟಿದೆ. ಸೋಂಕಿನಿಂದ ಸತ್ತವರ ಒಟ್ಟು ಸಂಖ್ಯೆ 8 ಸಾವಿರದ ಗಡಿ (8,023) ದಾಟಿದೆ.

ರಾಜ್ಯದಲ್ಲಿ ಮಾ.10 ರಂದು ಪ್ರಥಮ ಕೋವಿಡ್ ಮರಣ ಪ್ರಕರಣ ವರದಿಯಾಗಿತ್ತು. ಅದಾಗಿ ಮುಂದಿನ ನಾಲ್ಕು ತಿಂಗಳ ಅವಧಿಯಲ್ಲಿ (ಜೂ.30) ಮೃತರ ಸಂಖ್ಯೆ 246ಕ್ಕೆ ತಲುಪಿತ್ತು. ಬಳಿಕ ಏರುಗತಿ ಪಡೆದು, ಜುಲೈ ಅಂತ್ಯಕ್ಕೆ 2,314 ಪ್ರಕರಣಗಳು ವರದಿಯಾಗಿದ್ದವು. ಆಗಸ್ಟ್ ಒಂದೇ ತಿಂಗಳಲ್ಲಿ 3,388 ಮಂದಿ ಸಾವಿಗೀಡಾಗಿರುವುದು ದೃಢಪಟ್ಟಿತ್ತು. ಈ ತಿಂಗಳು 20 ದಿನಗಳಲ್ಲಿ 2,321 ಮಂದಿ ಮರಣ ಹೊಂದಿರುವುದು ಖಚಿತಪಟ್ಟಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 116 ಮಂದಿ ಸಾವಿಗೀಡಾಗಿದ್ದಾರೆ. ಮೊದಲ ಮರಣ ವರದಿಯಾಗಿ ಏಳು ತಿಂಗಳು ಕಳೆಯುವ ಮುನ್ನವೇ ಮೃತರ ಸಂಖ್ಯೆ 8 ಸಾವಿರದ ಗಡಿ ದಾಟಿದೆ.

ರಾಜ್ಯದಲ್ಲಿ ಹೊಸದಾಗಿ 8,191 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 5.19 ಲಕ್ಷಕ್ಕೆ ಏರಿಕೆಯಾಗಿದೆ. ಕೋವಿಡ್ ಪರೀಕ್ಷೆಗಳ ಸಂಖ್ಯೆ ಮತ್ತೆ ಇಳಿಮುಖವಾಗಿದ್ದು, ಭಾನುವಾರ 60,477 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಈವರೆಗೆ 42.40 ಲಕ್ಷ ಮಂದಿ ಪರೀಕ್ಷೆ ಮಾಡಿಸಿಕೊಂಡಿದ್ದಾರೆ.ಕೋವಿಡ್ ಪೀಡಿತರಲ್ಲಿ ಮತ್ತೆ 8,511 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಗುಣಮುಖರಾದವರ ಸಂಖ್ಯೆ 4.13 ಲಕ್ಷಕ್ಕೆ ಏರಿಕೆಯಾಗಿದೆ.

ಸದ್ಯ 98 ಸಾವಿರ ಸೋಂಕಿತರು ಆಸ್ಪತ್ರೆಗಳು, ಕೋವಿಡ್ ಆರೈಕೆ ಕೇಂದ್ರಗಳು ಹಾಗೂ ಮನೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.ತೀವ್ರ ನಿಗಾ ಘಟಕಕ್ಕೆ(ಐಸಿಯು) ದಾಖಲಾಗುವ ರೋಗಿಗಳ ಸಂಖ್ಯೆ ಏರಿಕೆ ಕಂಡಿದ್ದು, 811 ಮಂದಿ ಐಸಿಯುವಿನಲ್ಲಿ ಇದ್ದಾರೆ.

ಬೆಂಗಳೂರಿನಲ್ಲಿ 3,322 ಕೋವಿಡ್ ಹೊಸ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 1.94 ಲಕ್ಷ ದಾಟಿದೆ. ಮೈಸೂರಿನಲ್ಲಿ ಮತ್ತೆ 481 ಮಂದಿ ಕೋವಿಡ್ ಪೀಡಿತರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.