ಸೋಮವಾರ, ಅಕ್ಟೋಬರ್ 18, 2021
24 °C

Covid-19 Karnataka Update: ರಾಜ್ಯದಲ್ಲಿ 629 ಹೊಸ ಪ್ರಕರಣ, 782 ಜನರು ಗುಣಮುಖ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 629 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ಪತ್ತೆಯಾಗಿದ್ದು, 17 ಜನರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 29,74,528ಕ್ಕೆ ಏರಿಕೆಯಾಗಿದೆ. 37,763 ಜನರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಈವರೆಗೆ 29,24,102 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 12,634 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಇಂದು ಗುಣಮುಖರಾಗಿ 782 ಜನರು ಬಿಡುಗಡೆಯಾಗಿದ್ದಾರೆ.

ಸೋಂಕು ದೃಢ ಪ್ರಮಾಣವು ಶೇ 0.67 ರಷ್ಟಿದ್ದರೆ, ಮರಣ ಪ್ರಮಾಣವು ಶೇ 2.70ರಷ್ಟಿದೆ.

ಬೆಂಗಳೂರಿನಲ್ಲಿ ಇಂದು ಹೊಸದಾಗಿ 229 ಜನರಿಗೆ ಸೋಂಕು ತಗುಲಿದ್ದು, ಒಟ್ಟಾರೆ 12,22,338 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 12.45 ಲಕ್ಷದ ಗಡಿ ದಾಟಿದೆ. ಇಂದು ಆರು ಜನರು ಮೃತಪಟ್ಟಿದ್ದು, ಈವರೆಗೂ 16,143 ಮಂದಿ ಸಾವಿಗೀಡಾಗಿದ್ದಾರೆ.

ಬಾಗಲಕೋಟೆ, ಚಿಕ್ಕಬಳ್ಳಾಪುರ ಮತ್ತು ದಾವಣಗೆರೆಯಲ್ಲಿ ತಲಾ ಒಂದು ಪ್ರಕರಣ ವರದಿಯಾಗಿವೆ. ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣಗಳು ದಾಖಲಾಗಿವೆ.

ಇನ್ನುಳಿದಂತೆ ಬಳ್ಳಾರಿ 2, ಬೆಳಗಾವಿ 12, ಬೆಂಗಳೂರು ಗ್ರಾಮಾಂತರ 16, ಚಾಮರಾಜನಗರ 5, ಚಿಕ್ಕಮಗಳೂರು 17, ಚಿತ್ರದುರ್ಗ 5, ದಕ್ಷಿಣ ಕನ್ನಡ 96, ದಾವಣಗೆರೆ 1, ಧಾರವಾಡ 7, ಹಾಸನ 27, ಹಾವೇರಿ 2, ಕೊಡಗು 30, ಕೋಲಾರ 5, ಮಂಡ್ಯ 22, ಮೈಸೂರು 58, ಶಿವಮೊಗ್ಗ 14, ತುಮಕೂರು 22, ಉಡುಪಿ 39 ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ 16 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವ ಹೊಸ ಪ್ರಕರಣಗಳು ಪತ್ತೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು