Covid-19 Karnataka Update | ರಾಜ್ಯದಲ್ಲಿಂದು 383 ಹೊಸ ಪ್ರಕರಣ, 4 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 383 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ಪತ್ತೆಯಾಗಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 9,48,849ಕ್ಕೆ ಏರಿಕೆಯಾಗಿದೆ. ಒಟ್ಟಾರೆ 12,303 ಜನರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಈವರೆಗೆ 9,30,465 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 6,062 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಇದರಲ್ಲಿ 122 ಜನರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಗುಣಮುಖರಾಗಿ 378 ಜನರು ಬಿಡುಗಡೆಯಾಗಿದ್ದಾರೆ.
ಇಂದಿನ 23/02/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/yd5zsgZKYT @PMOIndia @narendramodi @CMofKarnataka @BSYBJP @MoHFW_INDIA @drharshvardhan @mla_sudhakar @mdnhm_kar @Comm_dhfwka@CovidIndiaSeva @KarnatakaVarthe @PIBBengaluru pic.twitter.com/ayW2CwsTRl
— K'taka Health Dept (@DHFWKA) February 23, 2021
ಬೆಂಗಳೂರಿನಲ್ಲಿ ಇಂದು ಹೊಸದಾಗಿ 240 ಜನರಿಗೆ ಸೋಂಕು ತಗುಲಿದ್ದು, ಒಟ್ಟಾರೆ 3,95,344 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 4.04 ಲಕ್ಷದ ಗಡಿ ದಾಟಿದೆ. ಇಂದು ನಾಲ್ವರು ಮೃತಪಟ್ಟಿದ್ದು, ಈವರೆಗೂ 4,458 ಮಂದಿ ಸಾವಿಗೀಡಾಗಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.