ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: ರಾಜ್ಯದಲ್ಲಿ 4,553 ಹೊಸ ಸೋಂಕು ಪ್ರಕರಣ ದಾಖಲು

Last Updated 4 ಏಪ್ರಿಲ್ 2021, 15:47 IST
ಅಕ್ಷರ ಗಾತ್ರ

ಬೆಂಗಳೂರು:ಬೆಂಗಳೂರು: ರಾಜ್ಯದಲ್ಲಿ ಸತತ ಐದನೇ ದಿನ ಕೂಡ ನಾಲ್ಕು ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿದ್ದು, 24 ಗಂಟೆಗಳ ಅವಧಿಯಲ್ಲಿ 4,553 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 39,092ಕ್ಕೆ ತಲುಪಿದೆ.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹೊಸದಾಗಿ ಪ್ರಕರಣಗಳು ವರದಿಯಾಗಿದ್ದು, 7 ಜಿಲ್ಲೆಗಳಲ್ಲಿ ಮೂರಂಕಿ ತಲುಪಿದೆ. ಬೆಂಗಳೂರಿನಲ್ಲಿ ಮತ್ತೆ 2,787 ಮಂದಿ ಸೋಂಕಿತರಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4.47 ಲಕ್ಷ ದಾಟಿದೆ. ಮೈಸೂರು (260), ಕಲಬುರ್ಗಿ (170), ಬೆಂಗಳೂರು ಗ್ರಾಮಾಂತರ (155), ಬೀದರ್ (147), ತುಮಕೂರು (107), ಹಾಸನ (104), ಧಾರವಾಡ (100) ಜಿಲ್ಲೆಯಲ್ಲಿ ಅಧಿಕ ‍ಪ್ರಕರಣಗಳು ವರದಿಯಾಗಿವೆ.

ಕೋವಿಡ್ ಪೀಡಿತರಲ್ಲಿ ಮತ್ತೆ 15 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 8 ಮಂದಿ, ಕಲಬುರ್ಗಿಯಲ್ಲಿ 3 ಮಂದಿ, ಧಾರವಾಡದಲ್ಲಿ ಇಬ್ಬರು, ತುಮಕೂರು ಮತ್ತು ಹಾಸನದಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ. ಈವರೆಗೆ ಮೃತಪಟ್ಟವರ ಸಂಖ್ಯೆ 12,625ಕ್ಕೆ ತಲುಪಿದೆ. ಸದ್ಯ ಸೋಂಕು ದೃಢ ಪ್ರಮಾಣ ಶೇ 3.79 ರಷ್ಟಿದೆ. 331 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕೋವಿಡ್ ಪರೀಕ್ಷೆಗಳ ಸಂಖ್ಯೆ ಕೂಡ ಏರಿಕೆ ಕಂಡಿದೆ.

ಒಂದು ದಿನದ ಅವಧಿಯಲ್ಲಿ 1.19 ಲಕ್ಷ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಕೊರೊನಾ ಸೋಂಕಿತರಲ್ಲಿ 2,060 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಗುಣಮುಖರಾದವರ ಸಂಖ್ಯೆ 9.63 ಲಕ್ಷ ದಾಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT