ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: 13,800 ಹೊಸ ಪ್ರಕರಣ; 365 ಜನ ಸಾವು

Last Updated 5 ಜೂನ್ 2021, 15:03 IST
ಅಕ್ಷರ ಗಾತ್ರ

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 13,800 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಕರ್ನಾಟಕದಲ್ಲಿ ಇದುವರೆಗೆ ವರದಿಯಾದ ಸೋಂಕು ಪ್ರಕರಣಗಳ ಸಂಖ್ಯೆ 26,83,314ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕೋವಿಡ್ ದೃಢ ಪ್ರಮಾಣ ದರ ಶೇ 9.69ಕ್ಕೆ ಇಳಿದಿದೆ. ಇಂದು ಮೃತಪಟ್ಟ 365 ಮಂದಿಯೂ ಸೇರಿದಂತೆ ಈವರೆಗೆ ಒಟ್ಟು 31,260 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಇದರೊಂದಿಗೆ ಸೊಂಕಿನಿಂದ ಮೃತಪಟ್ಟವರ ಪ್ರಮಾಣ ಶೇ. 02.64ರಷ್ಟಾಗಿದೆ. ಹೊಸದಾಗಿ 25,346 ಮಂದಿ ಚೇತರಿಸಿಕೊಂಡಿದ್ದು, ಸದ್ಯ 2,68,275 ಪ್ರಕರಣಗಳು ಸಕ್ರಿಯವಾಗಿವೆ.

ಎಂದಿನಂತೆ ಬೆಂಗಳೂರಿನಲ್ಲಿ ಅತಿ ಹೆಚ್ಚು (2,686) ಪ್ರಕರಣಗಳು ವರದಿಯಾಗಿದ್ದು, 206 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ಮೈಸೂರಿನಲ್ಲಿ 1,155, ತುಮಕೂರು 695, ಹಾಸನ 568, ಬೆಳಗಾವಿ 847, ಉಡುಪಿ 552, ಚಿತ್ರದುರ್ಗ 449, ದಕ್ಷಿಣ ಕನ್ನಡ 714, ಶಿವಮೊಗ್ಗ 710 ಮತ್ತು ಚಿಕ್ಕಮಗಳೂರಿನಲ್ಲಿ (378) ಮುನ್ನೂರಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT