ಭಕ್ತರಿಗೆ ಪ್ರವೇಶ: ಸೋಮವಾರದೊಳಗೆ ತೀರ್ಮಾನ

ಬೆಂಗಳೂರು: ದೇವಸ್ಥಾನಗಳಿಗೆ ಭಕ್ತರ ಪ್ರವೇಶ ನಿರ್ಬಂಧ ಸಡಿಲಿಸುವ ಸಂಬಂಧ ಜುಲೈ 5ರೊಳಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದರು.
‘ಭಕ್ತರಿಗೆ ಪ್ರವೇಶ ನೀಡಿದರೆ ಒಮ್ಮೆಲೆ ನೂರಾರು ಜನ ಒಂದೆಡೆ ಸೇರಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗುವ ಆತಂಕ ಇದೆ. ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಸುದ್ದಿಗಾರರಿಗೆ ತಿಳಿಸಿದರು.
ಅರ್ಚಕರಿಗೆ ಕೋವಿಡ್ ಲಸಿಕೆಯನ್ನು ಹಂತ– ಹಂತವಾಗಿ ನೀಡಲಾಗುತ್ತಿದೆ. ಅರ್ಚಕರಿಗೆ ಸೀಮಿತವಾಗಿ ದೇಗಲುಗಳಲ್ಲಿ ಪೂಜೆ ಪುನಸ್ಕಾರ, ಆನ್‌ಲೈನ್‌ನಲ್ಲಿ ಪೂಜೆ ನಿರಂತರವಾಗಿ ನಡೆಯುತ್ತಿದೆ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.