ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಥಿಕ ಸ್ಥಿತಿ ಹದಗೆಟ್ಟಿದ್ದರೂ ಬಡವರಿಗಾಗಿ ಪ್ಯಾಕೇಜ್ ಘೋಷಿಸಿದ್ದೇವೆ: ಯಡಿಯೂರಪ್ಪ

Last Updated 11 ಜೂನ್ 2021, 7:02 IST
ಅಕ್ಷರ ಗಾತ್ರ

ಹಾಸನ:ಕೋವಿಡ್ ಲಾಕ್‌ಡೌನ್‌ನಿಂದಾಗಿ ರಾಜ್ಯದಲ್ಲಿ ಹಣಕಾಸು ಸ್ಥಿತಿ ಹದಗೆಟ್ಟಿದ್ದರೂ ಬಡವರ ಅನುಕೂಲಕ್ಕೆ ಪ್ಯಾಕೇಜ್ ಘೋಷಣೆ ಮಾಡಲಾಗಿದೆ ಎಂದು‌ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ‌ಹೇಳಿದರು.

ಶುಕ್ರವಾರ ಬೂವನಹಳ್ಳಿ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರ ಜತೆ‌ ಮಾತನಾಡಿದ ಅವರು‌, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಅಪೇಕ್ಷೆಯಂತೆ ಸದ್ಯದಲ್ಲೇ ಹಾಸನ ಏರ್‌ಪೋರ್ಟ್ ಕೆಲಸ ಆರಂಭಿಸಲಾಗುವುದು.ಹಾಸನ ಜಿಲ್ಲೆ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಹೆಚ್ಚಿದೆ. ಸೋಂಕು ನಿಯಂತ್ರಣಕ್ಕೆ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಕೋವಿಡ್‌ನಿಂದ ಜನ ಸಾವಿಗೀಡಾಗುತ್ತಿರುವುದಕ್ಕೆ ಸರ್ಕಾರವೇ ಕಾರಣ ಎಂಬ ಶಾಸಕ ಎಚ್.ಡಿ ರೇವಣ್ಣ ಹೇಳಿಕೆಗೆ ಕಿಡಿಕಾರಿದ‌ ಮುಖ್ಯಮಂತ್ರಿ, ಜವಾಬ್ದಾರಿಯುತ ಶಾಸಕರಾಗಿ ಬೇಜವಾಬ್ದಾರಿ ಹೇಳಿಕೆ ನೀಡಬಾರದು. ಅವರು ಸಹ ಶಾಸಕರಾಗಿ ಕೆಲಸ ನಿರ್ವಹಿಸಬೇಕಿದೆ. ಅವರ ಕೆಲಸ ನಿರ್ವಹಿಸದೆ ಬೇರೆಯವರ ಬಗ್ಗೆ ಬೆಟ್ಟು ತೋರಿಸಬಾರದು ಎಂದರು.

ಮೂರನೆ ಅಲೆಯಲ್ಲಿ ಯಾವುದೇ ಅನಾಹುತ ಆಗದಂತೆ ಸಿದ್ಧತೆ ಮಾಡುತ್ತಿದ್ದೇವೆ. ಕೋವಿಡ್ ಬಗ್ಗೆ ಸುಳ್ಳು ಲೆಕ್ಕ ಕೊಡುತ್ತಿದ್ದಾರೆ ಎಂಬ ವಿರೋಧ ಪಕ್ಷದವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕೋವಿಡ್ ಸುಳ್ಳು ಲೆಕ್ಕ ಕೊಡುತ್ತೇವೆ ಅಂದಿದ್ದು ಯಾರು..? ಅದರಿಂದ ನಮಗೇನು ಲಾಭ ಎಂದು ಪ್ರಶ್ನಿಸಿದರು.

ರಮೇಶ್ ಜಾರಕಿಹೋಳಿ ಪ್ರಕರಣದಲ್ಲಿ ಕಾನೂನು ಅದರದೆ ಆದ ಕ್ರಮ ಕೈಗೊಳ್ಳುತ್ತದೆ.‌ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆ ಇಲ್ಲ ಎಂದು ಉತ್ತರಿಸಿದರು.

ಹಾಸನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಕುರಿತು ಮುಖ್ಯಮಂತ್ರಿ ಅವರು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಸಭೆ ನಡೆಸುತ್ತಿದ್ದಾರೆ.
ಹಾಸನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಕುರಿತು ಮುಖ್ಯಮಂತ್ರಿ ಅವರು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಸಭೆ ನಡೆಸುತ್ತಿದ್ದಾರೆ.
ಬೂವನಹಳ್ಳಿ ಹೆಲಿಪ್ಯಾಡ್‌ನಲ್ಲಿ​ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಬೂವನಹಳ್ಳಿ ಹೆಲಿಪ್ಯಾಡ್‌ನಲ್ಲಿ​ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT