ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: ಪ್ರಕರಣಗಳು ಕೊಂಚ ಏರಿಕೆ

Last Updated 22 ಮೇ 2022, 16:10 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಕೊಂಚ ಏರಿಕೆ ಕಂಡಿದ್ದು, ಭಾನುವಾರ 167 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 10 ದಿನಗಳಲ್ಲಿ ವರದಿಯಾದ ಗರಿಷ್ಠ ಪ್ರಕರಣಗಳು ಇವಾಗಿವೆ.

ಮೇ 11 ರಂದು ರಾಜ್ಯದಲ್ಲಿ 167 ಪ್ರಕರಣಗಳು ವರದಿಯಾಗಿದ್ದವು. ಬಳಿಕ ಹೊಸ ಪ್ರಕರಣಗಳ ಸಂಖ್ಯೆ ನೂರರ ಗಡಿಯ ಆಸುಪಾಸಿನಲ್ಲಿತ್ತು. ಮೇ 20 ರಂದು 95 ಪ್ರಕರಣಗಳು ದೃಢಪಟ್ಟಿದ್ದವು. ಮೇ 21ರಂದು ಈ ಸಂಖ್ಯೆ 155ಕ್ಕೆ ಏರಿಕೆಯಾಗಿತ್ತು. ಭಾನುವಾರದೃಢಪಟ್ಟ ಪ್ರಕರಣಗಳಲ್ಲಿ 150 ಪ್ರಕರಣಗಳು ಬೆಂಗಳೂರಿನಲ್ಲಿಯೇ ವರದಿಯಾಗಿವೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 1,655ಕ್ಕೆ ಇಳಿಕೆಯಾಗಿದೆ. ಬಾಗಲಕೋಟೆ, ಬೀದರ್, ಚಾಮರಾಜನಗರ ಸೇರಿದಂತೆ 10 ಜಿಲ್ಲೆಗಳು ಕೋವಿಡ್ ಮುಕ್ತಗೊಂಡಿವೆ. 17 ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣ ಒಂದಂಕಿಯಲ್ಲಿದೆ. ಬೆಂಗಳೂರಿನಲ್ಲಿ 1,579 ಸೋಂಕಿತರು ಇದ್ದಾರೆ.

ಒಂದು ದಿನದ ಅವಧಿಯಲ್ಲಿ 20,048 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಸೋಂಕು ದೃಢ ಪ್ರಮಾಣ ಶೇ 0.77 ರಷ್ಟು ಇದೆ. ರಾಜ್ಯದಲ್ಲಿ ಈವರೆಗೆ ಕೋವಿಡ್ ಪೀಡಿತರಾದವರ ಒಟ್ಟು ಸಂಖ್ಯೆ 39.50 ಲಕ್ಷ ದಾಟಿದೆ. 39.08 ಲಕ್ಷಕ್ಕೂ ಅಧಿಕ ಮಂದಿ ಚೇತರಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT