ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್‌ಗಳ ಆಸ್ತಿ ತೆರಿಗೆಯಲ್ಲಿ ಶೇ 50ರಷ್ಟು ವಿನಾಯಿತಿ

Last Updated 11 ಜನವರಿ 2022, 5:33 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ನಿಂದ ನಷ್ಟ ಅನುಭವಿಸಿರುವ ಪ್ರವಾಸೋದ್ಯಮ ವಲಯದ ಪುನಶ್ಚೇತನಕ್ಕಾಗಿ ರಾಜ್ಯ ಸರ್ಕಾರವು ಆಸ್ತಿ ತೆರಿಗೆಯಲ್ಲಿ ವಿನಾಯಿತಿ ಘೋಷಿಸಿದೆ.

ಪ್ರವಾಸೋದ್ಯಮ ವಲಯಕ್ಕೆ ಒಳಪಡುವ ಹೋಟೆಲ್, ರೆಸಾರ್ಟ್, ಮನರಂಜನಾ ಪಾರ್ಕ್, ರೆಸ್ಟೋರೆಂಟ್‌ಗಳು 2021-22ನೇ ಸಾಲಿನ ‌ಆಸ್ತಿ ತೆರಿಗೆಯಲ್ಲಿ ಶೇ 50ರಷ್ಟು ಮಾತ್ರ ಪಾವತಿಸಬೇಕು. ಉಳಿದ ಶೇ 50ರಷ್ಟು ವಿನಾಯಿತಿ ನೀಡಲಾಗಿದೆ.

2021ರ ಏಪ್ರಿಲ್‌ನಿಂದ ಜೂನ್‌ವರೆಗಿನ ವಿದ್ಯುತ್ ಶುಲ್ಕದಲ್ಲೂ ವಿನಾಯಿತಿ ನೀಡಲಾಗಿದೆ. ಈ ಯೋಜನೆಯ ಸೌಲಭ್ಯ ಪಡೆಯಲು ಪ್ರವಾಸೋದ್ಯಮ ಇಲಾಖೆಯ ಕೆಟಿಟಿಎಫ್ ಕಾಯ್ದೆಯಡಿ ನೋಂದಣಿ ಕಡ್ಡಾಯ. ₹500 ನೋಂದಣಿ ಶುಲ್ಕ ಪಾವತಿಸಿ, 5 ವರ್ಷಗಳ ಅವಧಿಗೆ ನೋಂದಣಿ ಪ್ರಮಾಣಪತ್ರ ಪಡೆಯಬಹುದು.

ಹೆಚ್ಚಿನ ಮಾಹಿತಿಗೆ www.karnatakatourism.org ಅನ್ನು ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT