ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಓಮೈಕ್ರಾನ್: ದ.ಆಫ್ರಿಕಾದಿಂದ ರಾಜ್ಯಕ್ಕೆ ಬಂದ 10 ಮಂದಿ ಕಾಣೆ

Last Updated 3 ಡಿಸೆಂಬರ್ 2021, 11:24 IST
ಅಕ್ಷರ ಗಾತ್ರ

ಬೆಂಗಳೂರು:ಕೊರೊನಾವೈರಸ್‌ನ ರೂಪಾಂತರ ತಳಿಯಾಗಿರುವ 'ಓಮೈಕ್ರಾನ್‌' ಪ್ರಕರಣಗಳು ಹೆಚ್ಚಾಗಿ ವರದಿಯಾಗಿರುವ ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿರುವ 10 ಪ್ರಯಾಣಿಕರು ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.‌

ದೂರವಾಣಿ ಸಂಪರ್ಕಕ್ಕೂ ಸಿಗದ ಈ ಎಲ್ಲ ಪ್ರಯಾಣಿಕರುದಕ್ಷಿಣ ಆಫ್ರಿಕಾದಿಂದ ನವೆಂಬರ್ 12 ಮತ್ತು 22ರ ಅವಧಿಯಲ್ಲಿ ಬೆಂಗಳೂರಿಗೆ ಬಂದಿದ್ದಾರೆ.

ಯಾವುದೇ ಪರಿಸ್ಥಿತಿಯನ್ನೂ ನಿಭಾಯಿಸಲು ಸಿದ್ಧವಿರುವುದಾಗಿ ತಿಳಿಸಿರುವ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಸಂಪರ್ಕಕ್ಕೆ ಸಿಗದವರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಓಮೈಕ್ರಾನ್ ದೃಢಪಟ್ಟ ಎರಡು ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಸರ್ಕಾರವು ಸೋಂಕು ಪ್ರಕರಣ ತಡೆಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಇವನ್ನೂ ಓದಿ
*

*
*
*
*
*
*
*
*

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT