ಗುರುವಾರ , ಜನವರಿ 27, 2022
27 °C

ತಿಂಗಳಾಂತ್ಯಕ್ಕೆ ಶೇ 100ರಷ್ಟು ಲಸಿಕೆ ಪೂರ್ಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ರಾಜ್ಯದಲ್ಲಿ ಕೋವಿಡ್‌ ಮೊದಲ ಲಸಿಕೆ ನೀಡುವ ಕೆಲಸ ಶೇ 99ರಷ್ಟು ಪೂರ್ಣಗೊಂಡಿದೆ. ಜ.31 ರೊಳಗೆ ಶೇ 100ರಷ್ಟು ಲಸಿಕೆ ಸಾಧಿಸಲಿದ್ದೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಆರೋಗ್ಯ ಇಲಾಖೆಯು ಶಿವಾಜಿನಗರದ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಆರೋಗ್ಯ ಕಾರ್ಯಕರ್ತರು ಹಾಗೂ ಹಿರಿಯ ನಾಗರಿಕರಿಗೆ ಕೋವಿಡ್‌ ಲಸಿಕೆಯ ಮೂರನೇ ಡೋಸ್‌ (ಬೂಸ್ಟರ್) ನೀಡುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಶೇ 77ರಷ್ಟಿರುವ ಎರಡನೇ ಲಸಿಕೆ ಪ್ರಮಾಣವನ್ನು ಶೇ 80ಕ್ಕೆ ಹೆಚ್ಚಿಸಲಿದ್ದೇವೆ. ದೇಶದಲ್ಲಿ 115 ಕೋಟಿಯಷ್ಟು ಮೊದಲ ಲಸಿಕೆ ನೀಡಲಾಗಿದೆ. ಎರಡನೇ ಲಸಿಕೆ ಶೇ 75ರಷ್ಟು ಪೂರ್ಣಗೊಂಡಿದೆ. ಅಮೆರಿಕ ವೈದ್ಯಕೀಯ ಕ್ಷೇತ್ರದಲ್ಲಿ ಹೆಚ್ಚು ಸಂಶೋಧನೆಗಳಲ್ಲಿ ತೊಡಗಿರುವ ಹಾಗೂ ಅಭಿವೃದ್ಧಿಯಲ್ಲಿ ಮುಂದಿರುವ ದೇಶ. ಆದರೆ, ಅಮೆರಿಕಕ್ಕಿಂತ ಮೂರು ಪಟ್ಟು ಲಸಿಕೆಯನ್ನು ಭಾರತದಲ್ಲಿ ಯಶಸ್ವಿಯಾಗಿ ನೀಡಲಾಗಿದೆ’ ಎಂದರು.

‘ಕೋವಿಡ್‌ನ ಪ್ರಾರಂಭದ ದಿನಗಳಲ್ಲಿ ಕೆಲ ದೇಶಗಳು ಲಸಿಕೆ ಬಗ್ಗೆ ಉಡಾಫೆ ತೋರಿದವು. ಇದರಿಂದ ಕೋವಿಡ್‌ನ 2 ಮತ್ತು 3ನೇ ಅಲೆಗಳು ತೀವ್ರಗೊಂಡವು. ಈಗ ಅಲ್ಲಿಯೂ ಲಸಿಕೆ ಕಡ್ಡಾಯ ಮಾಡಲಾಗಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು