ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: 911 ಹೊಸ ಪ್ರಕರಣ, 11 ಮಂದಿ ಸಾವು

Last Updated 27 ಡಿಸೆಂಬರ್ 2020, 14:41 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಾದ್ಯಂತ ಭಾನುವಾರ 911 ಹೊಸ ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 9,16,256ಕ್ಕೆ ಏರಿಕೆಯಾಗಿದೆ. ಇವತ್ತು ಕೋವಿಡ್‌ನಿಂದ 11 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 12062ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಕಳೆದ 24 ಗಂಟೆಯಲ್ಲಿ 1214 ಮಂದಿ ಕೋವಿಡ್‌ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 13080 ಸಕ್ರಿಯ ಪ್ರಕರಣಗಳಿದ್ದು, ವಿವಿಧ ಆಸ್ಪತ್ರೆಗಳು, ಕೋವಿಡ್ ಕೇರ್ ಸೆಂಟರ್ ಮತ್ತು ಹೋಮ್ ಐಸೋಲೇಶನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ ಬೆಂಗಳೂರು ನಗರದಲ್ಲಿ ಅತಿ ಹೆಚ್ಚು 542 ಪ್ರಕರಣ ಪತ್ತೆಯಾಗಿದ್ದು, ಮೈಸೂರು 40 ಪ್ರಕರಣಗಳ ಮೂಲಕ 2ನೇ ಸ್ಥಾನದಲ್ಲಿದೆ. ರಾಮನಗರ ಜಿಲ್ಲೆಯಲ್ಲಿ ಇವತ್ತು ಹೊಸ ಪ್ರಕರಣಗಳು ಪತ್ತೆಯಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT