ಮಂಗಳವಾರ, ಜೂನ್ 22, 2021
24 °C

ಕೋವಿಡ್-19: ಕಲಬುರ್ಗಿಯಲ್ಲಿ ವಾರದ ಮೂರು ದಿನ ಸಂಪೂರ್ಣ ಲಾಕ್‌ಡೌನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಮತ್ತಷ್ಟು ಬಿಗಿ ಕ್ರಮಗಳಿಗೆ ಮುಂದಾಗಿದ್ದು, ಮೂರು ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್‌ ಮಾಡಲು ತೀರ್ಮಾನಿಸಿದೆ.

ಜಿಲ್ಲೆಯಾದ್ಯಂತ ಈ ವಾರದ ಗುರುವಾರ, ಶುಕ್ರವಾರ ಮತ್ತು ಶನಿವಾರ ಸಂಪೂರ್ಣ ಲಾಕ್‌ಡೌನ್‌ ಜಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಘೋಷಿಸಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಾರದ  ಮೂರು ದಿನ ಸಂಪೂರ್ಣ ಲಾಕ್‌ಡೌನ್‌ ಮಾಡಲಾಗುತ್ತದೆ. ಇದನ್ನು ನೋಡಿಕೊಂಡು ಮುಂದಿನ ದಿನಗಳ ಲಾಕ್‌ಡೌನ್‌ ಬಗ್ಗೆ ನಿರ್ಧಾರ ಮಾಡಲಾಗುತ್ತದೆ ಎಂದರು. 

ಸಂಪೂರ್ಣ ಲಾಕ್‌ಡೌನ್‌ನ  ಗುರುವಾರ, ಶುಕ್ರವಾರ ಮತ್ತು ಶನಿವಾರದಂದು ತರಕಾರಿ, ದಿನಸಿ ಖರೀದಿಗೂ ಅವಕಾಶ ಇರುವುದಿಲ್ಲ. ಹೋಟೆಲ್ ನಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶ ಇರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪ್ರಧಾನಿ ನರೇಂದ್ರ ‌ಮೋದಿ ಅವರೊಂದಿಗೆ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಮೋದಿ ಅವರು ಜಿಲ್ಲೆಯ ‌ಪರಿಸ್ಥಿತಿ ನೋಡಿಕೊಂಡು ನಿರ್ಧಾರ ತೆಗೆದುಕೊಳ್ಳಲು ಜಿಲ್ಲಾಧಿಕಾರಿ ಸ್ವತಂತ್ರರು ಎಂದರು. ಇದಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಒಪ್ಪಿಗೆ ಸೂಚಿಸಿದರು.

ಹೀಗಾಗಿ ಗುರುವಾರದಿಂದಲೇ ಸಂಪೂರ್ಣ ಲಾಕ್‌ಡೌನ್‌ ಜಾರಿಗೆ ತರುವ ನಿರ್ಣಯವನ್ನು  ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ತೆಗೆದುಕೊಂಡರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು