ಶುಕ್ರವಾರ, ಜುಲೈ 30, 2021
25 °C

ಖಾಸಗಿಗೆ ಹೆಚ್ಚಿನ ಡೋಸ್ ಲಸಿಕೆ: ನಿಲುವು ಸ್ಪಷ್ಟಪಡಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಖಾಸಗಿ ಆಸ್ಪತ್ರೆಗಳಿಗೆ ಶೇ 25ಕ್ಕೂ ಹೆಚ್ಚಿನ ಡೋಸ್ ಲಸಿಕೆ  ಲಭ್ಯ ಆಗಿರುವುದು ಮುಂದಿನ ದಿನಗಳಲ್ಲಿ ಸಮಸ್ಯೆ ತಂದೊಡ್ಡುವ ಸಾಧ್ಯತೆ ಇದೆ’ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಅರವಿಂದಕುಮಾರ್ ಅವರನ್ನು ಒಳಗೊಂಡ ವಿಶೇಷ ವಿಭಾಗೀಯ ಪೀಠ, ‘ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯದ ವ್ಯಕ್ತಿ ಖಾಸಗಿ ಸಂಸ್ಥೆಗಳಲ್ಲಿ ಲಸಿಕೆ ಪಡೆಯಬಹುದು. ಇದನ್ನು ಸಂವಿಧಾನದ 14ನೇ ವಿಧಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಗಮನಿಸಬೇಕಾದ ಅಗತ್ಯವಿದೆ’ ಎಂದು ಹೇಳಿತು. 

‘ಖಾಸಗಿ ಸಂಸ್ಥೆಗಳು ತಮ್ಮ ಪಾಲಿನ ಶೇ 25ರಷ್ಟಕ್ಕೂ ಹೆಚ್ಚುವರಿಯಾಗಿ 18 ಸಾವಿರ ಡೋಸ್‌ ಪಡೆದುಕೊಂಡಿವೆ. ಕೆಲ ರಾಜ್ಯಗಳಲ್ಲಿ ಖಾಸಗಿ ಸಂಸ್ಥೆಗಳು ತಮ್ಮ ಪಾಲಿನ ಡೋಸ್ ಖಾಲಿ ಮಾಡದಿದ್ದರೆ ಅದನ್ನು ಬೇರೆ ರಾಜ್ಯದಲ್ಲಿನ ಖಾಸಗಿ ಸಂಸ್ಥೆಗಳಿಗೆ ಲಭ್ಯವಾಗುವಂತೆ ಮಾಡಲಾಗಿದೆ’ ಎಂದು ಕೇಂದ್ರ ಸರ್ಕಾರ ವಿವರಿಸಿತು.

‘ಶೇ 25ಕ್ಕಿಂತ ಹೆಚ್ಚಿನ ಪಾಲನ್ನು ಖಾಸಗಿ ಸಂಸ್ಥೆಗಳು ಪಡೆದುಕೊಂಡರೆ ಮುಂದಿನ ದಿನಗಳಲ್ಲಿ ಸಮಸ್ಯೆ ಉದ್ಬವಿಸಲಿದೆ. ಈ ವಿಷಯದಲ್ಲಿ ಕೇಂದ್ರ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಬೇಕು. ಈಗಾಗಲೇ 18 ಸಾವಿರ ಹೆಚ್ಚುವರಿ ಡೋಸ್‌ಗಳನ್ನು ಖಾಸಗಿ ಸಂಸ್ಥೆಗಳು ಪಡೆದುಕೊಂಡಿರುವ ಕಾರಣ ಖಾಸಗಿ ಸಂಸ್ಥೆಗಳಿಗೆ ಕೆಲ ನಿರ್ದೇಶನಗಳನ್ನು ನೀಡಬೇಕಾಗುತ್ತದೆ. ಈ ಸಂಬಂಧ ಒಂದು ವಾರದೊಳಗೆ ಪ್ರತಿಕ್ರಿಯೆ ಸಲ್ಲಿಸಬೇಕು’ ಎಂದು ಎರಡೂ ಸರ್ಕಾರಗಳಿಗೆ ಪೀಠ ನಿರ್ದೇಶನ ನೀಡಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು