ಶುಕ್ರವಾರ, ಮಾರ್ಚ್ 31, 2023
32 °C
ಪ್ರಯಾಣಿಕರು ಒಂದು ಡೋಸ್‌ ಕೋವಿಡ್‌ ಲಸಿಕೆ ಪಡೆದಿರಬೇಕು

ಡೆಲ್ಟಾ ಪ್ಲಸ್‌: ಕೇರಳ ಗಡಿ ಉದ್ದಕ್ಕೂ ಕಣ್ಗಾವಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೇರಳದಲ್ಲಿ ಕೊರೊನಾ ವೈರಾಣುವಿನ ರೂಪಾಂತರವಾಗಿರುವ ಡೆಲ್ಟಾ ಪ್ಲಸ್‌ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವುದು ಹಾಗೂ ಸಂಭಾವ್ಯ ಮೂರನೇ ಅಲೆ ಅಲ್ಲಿ ಸದ್ಯದಲ್ಲೇ ಕಾಣಿಸಿಕೊಳ್ಳುವ ಕಾರಣಕ್ಕೆ ಆ ರಾಜ್ಯದಿಂದ ಬರುವ ವ್ಯಕ್ತಿಗಳ ಮೇಲೆ ಕಟ್ಟುನಿಟ್ಟಾಗಿ ಕಣ್ಗಾವಲು ಇಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಕೇರಳಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಗಳಲ್ಲೂ ವಿಶೇಷ ಕಣ್ಗಾವಲು ಇಡಲು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್‌ ಅವರು ಈ ಸಂಬಂಧ ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.

ಕ್ರಮಗಳೇನು?
* ವಿಮಾನ, ಬಸ್ಸು, ಟ್ಯಾಕ್ಸಿ ಮತ್ತು ಸ್ವಂತ ವಾಹನಗಳ ಮೂಲಕ ರಾಜ್ಯಕ್ಕೆ ಬರುವ ಪ್ರಯಾಣಿಕರು 72 ಗಂಟೆಗಳ ಹಿಂದೆ ಮಾಡಿಸಿದ ಆರ್‌ಟಿಪಿಸಿಆರ್‌ ನೆಗೆಟಿವ್‌ ಪರೀಕ್ಷಾ ವರದಿ ಅಥವಾ ಕನಿಷ್ಠ ಒಂದು ಡೋಸ್‌ ಕೋವಿಡ್‌ ಲಸಿಕೆ ಪಡೆದಿರುವ ಕುರಿತು ಪ್ರಮಾಣ ಪತ್ರ ಹೊಂದಿರಬೇಕು.

* ವಿಮಾನಯಾನ ಸಂಸ್ಥೆಗಳು 72 ಗಂಟೆಗಳ ಹಿಂದೆ ಮಾಡಿಸಿದ ಆರ್‌ಟಿಪಿಸಿಆರ್‌ ನೆಗೆಟಿವ್‌ ಪರೀಕ್ಷಾ ವರದಿ ಅಥವಾ ಕನಿಷ್ಠ ಒಂದು ಡೋಸ್‌ ಕೋವಿಡ್‌ ಲಸಿಕೆ ಪಡೆದಿರುವ ಕುರಿತು ಪ್ರಮಾಣ ಪತ್ರ ಹೊಂದಿರುವವರಿಗೆ ಮಾತ್ರ ಬೋರ್ಡಿಂಗ್‌ ಪಾಸ್‌ ನೀಡಬೇಕು.

* ರೈಲ್ವೆ ಪ್ರಾಧಿಕಾರವು ರೈಲಿನಲ್ಲಿ ಪ್ರಯಾಣಿಸುವ ಎಲ್ಲಾ ಪ್ರಯಾಣಿಕರು ಆರ್‌ಟಿಪಿಸಿಆರ್‌ ನೆಗೆಟಿವ್‌ ಪರೀಕ್ಷಾ ವರದಿ ಅಥವಾ ಕನಿಷ್ಠ ಒಂದು ಡೋಸ್‌ ಕೋವಿಡ್‌ ಲಸಿಕೆ ಪಡೆದಿರುವ ಕುರಿತು ಪ್ರಮಾಣ ಪತ್ರ ಹೊಂದಿರುವುದನ್ನು ಖಚಿತಪಡಿಸಬೇಕು.

* ಬಸ್‌ಗಳಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುವ ಮೊದಲೇ ಆರ್‌ಟಿಪಿಸಿಆರ್‌ ನೆಗೆಟಿವ್‌ ಪರೀಕ್ಷಾ ವರದಿ ಅಥವಾ ಕನಿಷ್ಠ ಒಂದು ಡೋಸ್‌ ಕೋವಿಡ್‌ ಲಸಿಕೆ ಪಡೆದಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು.

* ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಮೂಲಕ ರಾಜ್ಯಕ್ಕೆ ಪ್ರವೇಶಿಸುವ ವಾಹನಗಳ ಚಾಲಕರು, ಸಹಾಯಕರು, ಪ್ರಯಾಣಿಕರು ನೆಗೆಟಿವ್‌ ಪರೀಕ್ಷಾ ವರದಿ ಅಥವಾ ಕನಿಷ್ಠ ಒಂದು ಡೋಸ್‌ ಕೋವಿಡ್‌ ಲಸಿಕೆ ಪಡೆದಿರುವ ಪ್ರಮಾಣ ಪತ್ರ ಪರಿಶೀಲಿಸಲು ಚೆಕ್‌ ಪೋಸ್ಟ್‌ಗಳಲ್ಲಿ ಅಗತ್ಯ ಸಿಬ್ಬಂದಿಯನ್ನು ಜಿಲ್ಲಾಧಿಕಾರಿಗಳು ನಿಯೋಜಿಸಬೇಕು.

* ರಾಜ್ಯಕ್ಕೆ ಅಲ್ಪಾವಧಿಗೆ ಬರುವವರು ಮತ್ತು ವಿದ್ಯಾರ್ಥಿಗಳಿಗೂ ಮೇಲಿನ ನಿಯಮ ಅನ್ವಯವಾಗುತ್ತದೆ.

* ಕನಿಷ್ಠ ಒಂದು ಡೋಸ್‌ ಕೋವಿಡ್‌ ಲಸಿಕೆ ಪಡೆದಿರುವ ಪ್ರಮಾಣ ಪತ್ರ ಹೊಂದಿರುವವರು ಆರ್‌ಟಿಪಿಸಿಆರ್‌ ನೆಗೆಟಿವ್‌ ಟೆಸ್ಟ್‌ ವರದಿ ತರಬೇಕಾಗಿಲ್ಲ.

* ಎರಡು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಈ ನಿಯಮಗಳಿಂದ ವಿನಾಯ್ತಿ ನೀಡಲಾಗಿದೆ.

* ಮರಣ ಮತ್ತು ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ ಬರುವವರಿಗೆ ಗಂಟಲ ದ್ರವ ಮಾದರಿಯನ್ನು ರಾಜ್ಯದಲ್ಲಿ ಸಂಗ್ರಹಿಸಿ, ಕೋವಿಡ್‌ ಶಿಷ್ಟಾಚಾರವನ್ನು ಪಾಲಿಸಬೇಕು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು