ಭಾನುವಾರ, ಜೂನ್ 13, 2021
28 °C

ಕೋವಿಡ್–19: ಅನಾಥ ಮಕ್ಕಳ ಪಾಲನೆಗೆ ಸರ್ಕಾರದಿಂದ ಪ್ರತ್ಯೇಕ ಕೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್–19 ಸೋಂಕಿನ ವಿರುದ್ಧದ ಹೋರಾಟದ ಭಾಗವಾಗಿ ಸರ್ಕಾರವು ಪ್ರತಿ ಜಿಲ್ಲೆಯಲ್ಲೂ ಕ್ವಾರಂಟೈನ್ ಕೇಂದ್ರ ಮತ್ತು ಅನಾಥ ಮಕ್ಕಳ ಪಾಲನೆಗೆ ಪ್ರತ್ಯೇಕ ಕೇಂದ್ರ ಆರಂಭಿಸಿದೆ ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ.

‘ಕೋವಿಡ್ ಸೋಂಕಿನಿಂದ ಪಾಲಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳ ಪಾಲನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರತ್ಯೇಕ ಕ್ವಾರಂಟೈನ್ ಕೇಂದ್ರಗಳನ್ನು ಆರಂಭಿಸಿದೆ. 993 ಕೇಂದ್ರಗಳಲ್ಲಿ 7069 ಮಕ್ಕಳು ಆಶ್ರಯ ಪಡೆದಿದ್ದಾರೆ. ಗಂಡು - ಹೆಣ್ಣು ಮಕ್ಕಳಿಗೆ ಪ್ರತ್ಯೇಕವಾಗಿ ಆಶ್ರಯ ಕಲ್ಪಿಸಲಾಗುವುದು’ ಎಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದೆ.

ಓದಿ: 

‘ಪ್ರತಿ ಜಿಲ್ಲೆಯಲ್ಲೂ ಕ್ವಾರಂಟೈನ್ ಕೇಂದ್ರ ಸ್ಥಾಪನೆಯಾಗಿದೆ. ಮಾಹಿತಿಗಾಗಿ 1098 / 14499 ಕ್ಕೆ ಕರೆಮಾಡಿ. ಕೋವಿಡ್ ವಿರುದ್ಧದ ಹೋರಾಟವನ್ನು ಬಿಎಸ್‌ವೈ ಸರ್ಕಾರ ಬಲಪಡಿಸುತ್ತಿದೆ’ ಎಂದು ಮತ್ತೊಂದು ಟ್ವೀಟ್‌ನಲ್ಲಿ ಹೇಳಿದೆ.

‘ಕೋವಿಡ್ ಸೋಂಕಿತರಿಗಾಗಿ ರಾಜ್ಯ ಸರ್ಕಾರ ಬೆಂಗಳೂರು ಕೃಷಿ ವಿವಿ ಜಿಕೆವಿಕೆ ಆವರಣದಲ್ಲಿ ಕೋವಿಡ್ ಆರೈಕೆ ಕೇಂದ್ರ ಆರಂಭಿಸಿದೆ. ಈ ಕೇಂದ್ರ 350 ಹಾಸಿಗೆ ಸಾಮರ್ಥ್ಯ ಹೊಂದಿರಲಿದೆ. ವೈದ್ಯಕೀಯ ಸಿಬ್ಬಂದಿಗಾಗಿ 30 ಹಾಸಿಗೆ ಸಾಮರ್ಥ್ಯದ ಸ್ಟಾಫ್ ಕ್ವಾಟ್ರರ್ಸ್ ಸೌಲಭ್ಯವಿರಲಿದೆ. 24 ಗಂಟೆ ಸೇವೆ ಲಭ್ಯವಿರಲಿದೆ’ ಎಂದೂ ಬಿಜೆಪಿ ಹೇಳಿದೆ.

ಓದಿ: 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು