ಗುರುವಾರ , ಮೇ 19, 2022
25 °C

ಕೋವಿಡ್: 15 ಜಿಲ್ಲೆಗಳು ಸೋಂಕು ಮುಕ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಬಾಗಲಕೋಟೆ, ಬೀದರ್ ಸೇರಿದಂತೆ 15 ಜಿಲ್ಲೆಗಳು ಕೋವಿಡ್ ಮುಕ್ತಗೊಂಡಿವೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,459ಕ್ಕೆ ಇಳಿಕೆ ಕಂಡಿದೆ.

ಕೋವಿಡ್ ಮೂರನೇ ಅಲೆ ಕಾಣಿಸಿಕೊಂಡ ಬಳಿಕ ಎರಡು ಲಕ್ಷದ ಗಡಿ ಸಮೀಪಿಸಿದ್ದ ಕೋವಿಡ್ ಪರೀಕ್ಷೆಗಳ ಸಂಖ್ಯೆ, ಸೋಂಕು ನಿಯಂತ್ರಣಕ್ಕೆ ಬಂದಿರುವುದರಿಂದ 11,859ಕ್ಕೆ ಇಳಿಕೆಯಾಗಿದೆ. ಕಳೆದೊಂದು ತಿಂಗಳಿನಿಂದ ಹೊಸ ಪ್ರಕರಣಗಳು ಹಾಗೂ ಪರೀಕ್ಷೆಗಳ ಸಂಖ್ಯೆ ಇಳಿಮುಖ ಮಾಡಿದೆ. 

ರಾಜ್ಯದಲ್ಲಿ ಈವರೆಗೆ ಸೋಂಕಿತರಾದವರ ಒಟ್ಟು ಸಂಖ್ಯೆ 39.45 ಲಕ್ಷ ದಾಟಿದೆ. ಕೋವಿಡ್ ಪೀಡಿತರಲ್ಲಿ 39.04 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ. ಚಿಕ್ಕಮಗಳೂರು, ಗದಗ, ಹಾಸನ, ಹಾವೇರಿ, ಕೊಡಗು, ಕೊಪ್ಪಳ, ಮಂಡ್ಯ, ರಾಯಚೂರು, ರಾಮನಗರ, ತುಮಕೂರು, ಉತ್ತರ ಕನ್ನಡ ಹಾಗೂ ವಿಜಯಪುರದಲ್ಲಿ ಸಕ್ರಿಯ ಪ್ರಕರಣಗಳಿಲ್ಲ. 

ಯಾದಗಿರಿ, ಉಡುಪಿ ಸೇರಿದಂತೆ 12 ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಹತ್ತಕ್ಕಿಂತ ಕಡಿಮೆ ಇದೆ. ಬೆಂಗಳೂರಿನಲ್ಲಿ 1,385 ಸೋಂಕಿತರಿದ್ದಾರೆ. ಸೋಂಕು ದೃಢ ಪ್ರಮಾಣ ಶೇ 0.64ಕ್ಕೆ ಇಳಿಕೆಯಾಗಿದೆ. ವಾರದ ಸರಾಸರಿ ಶೇ 0.43 ರಷ್ಟಿದೆ. ಕೊರೊನಾ ಸೋಂಕಿತರಲ್ಲಿ ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 40,057ಕ್ಕೆ ಏರಿಕೆಯಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು