ಕೋವಿಡ್ ಪರಿಹಾರ ಕಾರ್ಯದಲ್ಲಿ ಸರ್ಕಾರ & ಪಕ್ಷ ಸಮನ್ವಯತೆಯಿಂದ ಕಾರ್ಯನಿರ್ವಹಿಸುತ್ತಿದೆ. ಶಾಸಕರು, ಪಕ್ಷದ ಜಿಲ್ಲಾಧ್ಯಕ್ಷರು ಸೇರಿ ಜಿಲ್ಲೆಗಳಲ್ಲಿ ವಾರ್ರೂಮ್ ತೆರೆದಿದ್ದೇವೆ. ಇಲ್ಲಿಗೆ ಬರುವ ಕರೆಗಳನ್ನು ಜಿಲ್ಲಾಡಳಿತ, ಉಸ್ತುವಾರಿ ಸಚಿವರಿಗೆ ತಲುಪಿಸುವ ಕೆಲಸ ಸೇರಿದಂತೆ 13 ಅಂಶಗಳನ್ನೊಳಗೊಂಡ ಸೇವೆ ಮಾಡಲಾಗುತ್ತಿದೆ.
ಸರ್ಕಾರ ಕೈಗೊಳ್ಳುತ್ತಿರುವ ನಿರ್ಣಯಗಳು ನೂರಕ್ಕೆ ನೂರು ಸರಿದಾರಿಯಲ್ಲಿದೆ. ಕೋವಿಡ್ ವಿಷಮ ಪರಿಸ್ಥಿತಿಯಲ್ಲಿ ಬೇರಾವುದೇ ಪಕ್ಷ ಅಧಿಕಾರದಲ್ಲಿದ್ದಿದ್ದರೆ ಪರಿಸ್ಥಿತಿ ನಿಭಾವಣೆ ಕಷ್ಟವಿತ್ತು.
ಕಾಂಗ್ರೆಸ್ ಆಡಳಿತದಲ್ಲಿ ದೇಶದಲ್ಲಿ ಕೇವಲ 2 ಏಮ್ಸ್ ಇದ್ದವು, ಮೋದಿ ಸರ್ಕಾರ ಕೇವಲ 7 ವರ್ಷದಲ್ಲಿ 9 ಏಮ್ಸ್ ಸ್ಥಾಪಿಸಿದ್ದಾರೆ.