ಅಸಮರ್ಥತೆ ಮುಚ್ಚಿಕೊಳ್ಳಲು ಬಿಜೆಪಿ ನಾಯಕರು ಈಗ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಕೈಲಾಗದ ಮಾತಾಡುತ್ತಿದ್ದಾರೆ. ವಿರೋಧ ಪಕ್ಷಗಳನ್ನು ಟೀಕಿಸುತ್ತಿದ್ದಾರೆ. ಭೂ ಕೈಲಾಸ ಸೃಷ್ಟಿಸುವ ಬಿಜೆಪಿ ಮಾತು ನಂಬಿ ಜನ ಅಧಿಕಾರ ನೀಡಿದ್ದಾರೆ. ಜನರ ಆಶಯಕ್ಕೆ ತಕ್ಕಂತೆ ಬಿಜೆಪಿ ನಡೆದುಕೊಳ್ಳಬೇಕು. ಕೈಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಬೇಕು. 4/7
'ಅವರು ಅಷ್ಟು ವರ್ಷ ಅಧಿಕಾರ ಮಾಡಿದರು, ಇವರು ಅಷ್ಟು ವರ್ಷ ತಿಂದರು,' ಎಂದು ದೂಷಿಸಿಕೊಂಡೇ ಅಧಿಕಾರಕ್ಕೆ ಬಂದ ಬಿಜೆಪಿ ಈಗ ಹೊಣೆಗೇಡಿತನ ಪ್ರದರ್ಶಿಸುತ್ತಿದೆ. ಪ್ರತಿಯೊಂದಕ್ಕೂ ವಿರೋಧ ಪಕ್ಷಗಳನ್ನು ದೂಷಿಸುವ ಬಿಜೆಪಿಗೆ ಅಧಿಕಾರವೇಕೆ? 'ಕೊಟ್ಟ ಕುದುರೆಯನ್ನು ಏರಲಾಗದವನು ಧೀರನೂ ಅಲ್ಲ, ಶೂರನೂ ಅಲ್ಲ,' ಎಂಬ ಮಾತು ಬಿಜೆಪಿಗೆ ಹೊಂದುವಂಥದ್ದು. 2/7
ಕೇರಳ, ಆಂಧ್ರ ಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳ, ದೆಹಲಿಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರುತ್ತಿದೆ. ಕೋವಿಡ್ ಪರಿಸ್ಥಿತಿ ನಿಭಾಯಿಸುವ ವೇಳೆ ಜನರಿಗೆ ಆದ ತೊಂದರೆಗೆ ಈ ರಾಜ್ಯಗಳಲ್ಲಿ ಪರಿಹಾರಗಳನ್ನೂ ನೀಡಲಾಗಿದೆ. ಜನರಿಗೆ ಉಚಿತ ಆಹಾರ, ಆರೋಗ್ಯ ಸೇವೆ ನೀಡಲಾಗಿದೆ. ಜನರೆಡೆಗೆ ಪ್ರಾದೇಶಿಕ ಪಕ್ಷಗಳಿಗೆ ಇರುವ ಬದ್ಧತೆಗೆ ಇದು ಸಾಕ್ಷಿ. 6/7
ಬಿಜೆಪಿ ನಾಯಕರು ಕೈಲಾಗದ ಮಾತು ಬಿಡಿ. ಜನರನ್ನು ಮತ್ತಷ್ಟು ನಿರಾಶರನ್ನಾಗಿಸಬೇಡಿ. ಜನರ ಆರೋಗ್ಯ, ಜೀವ ಮುಖ್ಯ. ಅದಕ್ಕಾಗಿ ಸಕಲವನ್ನೂ ಮಾಡಿ. ಕೇಂದ್ರದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಸಂಸದರು, ಸಚಿವರು ಶ್ರೀಕೃಷ್ಣನ ಮಾತುಗಳನ್ನು ನೆನಪಿಸಿಕೊಳ್ಳಿ. 'ನಿಮ್ಮ ಕರ್ತ್ಯವ್ಯ ನೀವು ಮಾಡಿ.' ಈ ಮೂಲಕ ರಾಜ್ಯಕ್ಕೆ ಬರಬೇಕಾದ್ದನ್ನು ತನ್ನಿ. 7/7