ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 1,32,364 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 2,713 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ಶುಕ್ರವಾರ ಬೆಳಿಗ್ಗೆ ತಿಳಿಸಿದೆ.

ಇದರೊಂದಿಗೆ ದೇಶದಲ್ಲಿ ಈವರೆಗೆ ಸೋಂಕು ತಗುಲಿದವರ ಸಂಖ್ಯೆ 2,85,74,350 ತಲುಪಿದೆ. ಸಾವಿನ ಸಂಖ್ಯೆ 3,40,702ಕ್ಕೆ ಏರಿಕೆಯಾಗಿದೆ. 2,65,97,655 ಮಂದಿ ಈವರೆಗೆ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಸಕ್ರಿಯ ಪ್ರಕರಣಗಳ ಸಂಖ್ಯೆ ಸತತ ನಾಲ್ಕು ದಿನಗಳಿಂದ 20 ಲಕ್ಷಕ್ಕಿಂತ ಕಡಿಮೆಯಾಗಿದೆ. ಸದ್ಯ ದೇಶದಲ್ಲಿ 16,35,993 ಸಕ್ರಿಯ ಪ್ರಕರಣಗಳಿವೆ.

ದೇಶದಾದ್ಯಂತ ಇಂದಿನ ವರೆಗೆ (ಜೂನ್ 4) 22,41,09,448 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದೂ ಸಚಿವಾಲಯ ತಿಳಿಸಿದೆ.

ಈವರೆಗೆ 35,74,33,846 ಮಾದರಿಗಳ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.