ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಕೋವಿಡ್-19

ಬೆಂಗಳೂರು: ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್–19 ಸೋಂಕು ದೃಢಪಟ್ಟಿದ್ದು, ಈ ಬಗ್ಗೆ ಅವರೇ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ.
ತಮಗೆ ಸೋಂಕು ತಗುಲಿದೆಯಾದರೂ, ರೋಗದ ಲಕ್ಷಣಗಳು ಕಾಣಿಸಿಕೊಂಡಿಲ್ಲ ಆರೋಗ್ಯವಾಗಿದ್ದೇನೆ. ಮನೆಯಲ್ಲಿಯೇ ಪ್ರತ್ಯೇಕವಾಸದಲ್ಲಿದ್ದೇನೆ ಎಂದು ತಿಳಿಸಿದ್ದಾರೆ.
ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು ನನಗೂ ಸಹ ಸೊಂಕು ದೃಢಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ.#COVID19India
— Basavaraj S Bommai (@BSBommai) September 16, 2020
ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಪರೀಕ್ಷೆಗೆ ಒಳಪಡುವಂತೆ ಹಾಗೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ.
— Basavaraj S Bommai (@BSBommai) September 16, 2020
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.