ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka: ರಾಜ್ಯದಲ್ಲಿ ಸೋಂಕಿನ ಪ್ರಮಾಣ ಇಳಿಕೆ, 2,258 ಹೊಸ ಪ್ರಕರಣ

Last Updated 7 ನವೆಂಬರ್ 2020, 16:16 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಹೊಸ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು ಕಳೆದ 24 ಗಂಟೆಗಳಲ್ಲಿ 2,258 ಪ್ರಕರಣಗಳು ದಾಖಲಾಗಿದ್ದು 22 ಜನ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ಶನಿವಾರ 2235 ಮಂದಿ ಗುಣಮುಖರಾಗಿದ್ದು, ಈವರೆಗೂ ಒಟ್ಟು 7,99,439 ಮಂದಿ ಚೇತರಿಸಿಕೊಂಡಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 33,320 ಸಕ್ರಿಯ ಪ್ರಕರಣಗಳು ಇರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಒಟ್ಟು ಕೋವಿಡ್‌–19 ಪ್ರಕರಣಗಳ ಸಂಖ್ಯೆ 8,44,147 ತಲುಪಿದೆ ಹಾಗೂ ಈವರೆಗೂ 11,369ಮಂದಿ ಮೃತಪಟ್ಟಿದ್ದಾರೆ. ಐಸಿಯುನಲ್ಲಿ 887ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಅತಿ ಹೆಚ್ಚು 1046 ಪ್ರಕರಣಗಳು ದಾಖಲಾಗಿದ್ದು, 502 ಮಂದಿ ಬಿಡುಗಡೆಯಾಗಿದ್ದಾರೆ. ತುಮಕೂರಿನಲ್ಲಿ 165 ಪ್ರಕರಣಗಳು, ಚಿತ್ರದುರ್ಗದಲ್ಲಿ 98, ಹಾಸನದಲ್ಲಿ 83 ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT