ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: ರಾಜ್ಯದಲ್ಲಿ 677 ಹೊಸ ಪ್ರಕರಣ, 4 ಸಾವು

Last Updated 5 ಮಾರ್ಚ್ 2021, 16:45 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 677 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಎಂದಿನಂತೆ ಬೆಂಗಳೂರು ನಗರದಲ್ಲಿ ಅತಿ ಹೆಚ್ಚು 444 ಪ್ರಕರಣ ಪತ್ತೆಯಾಗಿವೆ.

ಈವರೆಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,53,813ಕ್ಕೆ ಏರಿಕೆಯಾಗಿದೆ. 9,35,066 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ, ರಾಜ್ಯದಲ್ಲಿ 6374 ಕೋವಿಡ್ ಸಕ್ರಿಯ ಪ್ರಕರಣಗಳಿವೆ. 112 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋವಿಡ್‌ನಿಂದ ಇಂದು 4 ಮಂದಿ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 12,354ಕ್ಕೆ ಏರಿಕೆಯಾಗಿದೆ.

ಇದುವರೆಗೂ ರಾಜ್ಯದಲ್ಲಿ 4,59,214 ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಇದರಲ್ಲಿ 50,368 ಮಂದಿ 60 ವರ್ಷ ಮೇಲ್ಪಟ್ಟವರು ಮತ್ತು ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರುಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT