ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid 19 Karnataka Update: 286 ಹೊಸ ಪ್ರಕರಣ, 7 ಮಂದಿ ಸಾವು 

Last Updated 11 ನವೆಂಬರ್ 2021, 13:29 IST
ಅಕ್ಷರ ಗಾತ್ರ

ಬೆಂಗಳೂರು: 24 ಗಂಟೆಗಳಲ್ಲಿ ರಾಜ್ಯದಲ್ಲಿ 286 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 7 ಮಂದಿ ಸಾವಿಗೀಡಾಗಿದ್ದಾರೆ. 289 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.

ಈವರೆಗೆ ಕೋವಿಡ್ ದೃಢಪಟ್ಟ ಪ್ರಕರಣಗಳ ಒಟ್ಟು ಸಂಖ್ಯೆ 29,91,142ಕ್ಕೆ ಏರಿದ್ದು, 29,44,958 ಮಂದಿ ಚೇತರಿಸಿಕೊಂಡಿದ್ದಾರೆ. 38,138 ಮಂದಿ ಕೋವಿಡ್‌ನಿಂದ ಅಸುನೀಗಿದ್ದಾರೆ.

ರಾಜ್ಯದಲ್ಲಿ ಸದ್ಯ 8,017 ಸಕ್ರಿಯ ಪ್ರಕರಣಗಳಿವೆ. ಕೋವಿಡ್ ದೃಢ ಪ್ರಮಾಣ ಶೇಕಡಾ 0.25ರಷ್ಟಿದ್ದು, ಮರಣ ಪ್ರಮಾಣ ಶೇಕಡಾ 2.44ರಷ್ಟಿದೆ.

ಬೆಂಗಳೂರು ನಗರದಲ್ಲಿ 169 ಪ್ರಕರಣಗಳು ದೃಢಪಟ್ಟಿದ್ದು, ಮೂವರು ಸಾವಿಗೀಡಾಗಿದ್ದಾರೆ. 12 ಜಿಲ್ಲೆಗಳಲ್ಲಿ ಯಾವುದೇ ಕೋವಿಡ್ ಪ್ರಕರಣ ದಾಖಲಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT