ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಟಿ ಸ್ಕ್ಯಾನ್‌, ಡಿಜಿಟಲ್ ಎಕ್ಸ್‌ರೇಗೆ ದರ ನಿಗದಿಪಡಿಸಿದ ಸರ್ಕಾರ: ಎಷ್ಟಿದೆ ನೋಡಿ

Last Updated 7 ಮೇ 2021, 9:15 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್–19 ಸೋಂಕು ಪತ್ತೆಗಾಗಿ ಈಚೆಗೆ ಸಿಟಿ ಸ್ಕ್ಯಾನ್‌, ಡಿಜಿಟಲ್ ಎಕ್ಸ್‌ರೇಯನ್ನೂ ಮಾಡಬೇಕಾಗಿ ಬರುವುದರಿಂದ ಖಾಸಗಿ ಆಸ್ಪತ್ರೆಗಳು ಹಾಗೂ ಪ್ರಯೋಗಾಲಯಗಳಿಗೆ ದರ ನಿಗದಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

‘ಇತ್ತೀಚೆಗೆ ಅನೇಕ ಪ್ರಕರಣಗಳಲ್ಲಿ ಕೊರೊನಾ ಸೋಂಕು ದೃಢಪಡಿಸಲು ಸಿಟಿ ಸ್ಕ್ಯಾನ್ ಹಾಗೂ ಡಿಜಿಟಲ್ ಎಕ್ಸ್‌ರೇ ಅವಶ್ಯಕತೆ ಇರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆ ಹಾಗೂ ಲ್ಯಾಬ್‌ಗಳಲ್ಲಿ ಸಿಟಿ ಸ್ಕ್ಯಾನ್ ಗೆ ಗರಿಷ್ಠ ₹1,500 ಹಾಗೂ ಡಿಜಿಟಲ್ ಎಕ್ಸ್‌ರೇಗೆ ಗರಿಷ್ಠ ₹250 ದರ ನಿಗದಿ ಮಾಡಿ ಆದೇಶ ಹೊರಡಿಸಲಾಗಿದೆ’ ಎಂದು ಟ್ವೀಟ್‌ನಲ್ಲಿ ಸಚಿವರು ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT