ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: 1.80 ಲಕ್ಷ ಸಕ್ರಿಯ ಪ್ರಕರಣ, ಮರಣ ಪ್ರಮಾಣ ಶೇ 1.60

ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಾದ್ಯಂತ ಶನಿವಾರ 7,810 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 125 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೋವಿಡ್‌ ಹೊಸ ಪ್ರಕರಣಗಳ ಜತೆಗೆ ಮರಣ ಪ್ರಕರಣಗಳ ಸಂಖ್ಯೆ ಕೂಡ ಇಳಿಕೆ ಕಂಡಿದೆ. ಮರಣ ಪ್ರಮಾಣ ದರವು ಶೇ 1.60ರಷ್ಟಿದ್ದರೆ, ಪಾಸಿಟಿವಿಟಿ ಪ್ರಮಾಣವು ಶೇ 6.02 ರಷ್ಟು ವರದಿಯಾಗಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 27,65,134 ಕ್ಕೆ ಏರಿಕೆಯಾಗಿದೆ. ಆ ಪೈಕಿ 32,913 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ 25,51,365 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 1,80,835 ಸಕ್ರಿಯ ಪ್ರಕರಣಗಳಿವೆ.

ಇಂದು ಬೆಂಗಳೂರಿನಲ್ಲಿ 1348 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 23 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ಶಿವಮೊಗ್ಗ 393, ಹಾಸನ 581, ದಕ್ಷಿಣ ಕನ್ನಡ 434, ಮೈಸೂರು 1251, ಬೆಳಗಾವಿ 266, ತುಮಕೂರು ಜಿಲ್ಲೆಯಲ್ಲಿ 352 ಹೊಸ ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT