ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: 2,984 ಹೊಸ ಪ್ರಕರಣ, 88 ಮಂದಿ ಸೋಂಕಿತರು ಸಾವು

Last Updated 2 ಜುಲೈ 2021, 13:58 IST
ಅಕ್ಷರ ಗಾತ್ರ

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 2,984 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಕರ್ನಾಟಕದಲ್ಲಿ ಇದುವರೆಗೆ ವರದಿಯಾದ ಸೋಂಕು ಪ್ರಕರಣಗಳ ಸಂಖ್ಯೆ 28,49,997ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇಂದು ಮೃತಪಟ್ಟ 88 ಮಂದಿಯೂ ಸೇರಿದಂತೆ ಈವರೆಗೆ ಒಟ್ಟು 35,222 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಇಂದಿನ ಖಚಿತ ಪ್ರಕರಣಗಳ ಪ್ರಮಾಣ ಶೇ 1.92ರಷ್ಟಿದ್ದು, ಮೃತಪಟ್ಟವರ ಪ್ರಮಾಣ ಶೇ 2.94ರಷ್ಟಿದೆ.

ಸದ್ಯ 53,505 ಪ್ರಕರಣಗಳು ಸಕ್ರಿಯವಾಗಿದ್ದು, ಇಂದು 14,337 ಜನರು ಸೋಂಕಿನಿಂದ ಚೇತರಿಸಿಕೊಂಡಿರುವುದಾಗಿ ಆರೋಗ್ಯ ಇಲಾಖೆಯ ಕೋವಿಡ್‌ ಬುಲೆಟಿನ್‌ನಲ್ಲಿ ತಿಳಿಸಿದೆ.

ಎಂದಿನಂತೆ ಬೆಂಗಳೂರಿನಲ್ಲಿ ಅತಿ ಹೆಚ್ಚು (593) ಪ್ರಕರಣಗಳು ವರದಿಯಾಗಿದ್ದು, 11 ಮಂದಿ ಮೃತಪಟ್ಟಿದ್ದಾರೆ. ಸದ್ಯ 23,424 ಸಕ್ರಿಯ ಪ್ರಕರಣಗಳಿವೆ. ಉಳಿದಂತೆ ಮೈಸೂರು (457), ಹಾಸನ (271), ಬೆಳಗಾವಿ (97), ತುಮಕೂರು (141), ಉಡುಪಿ (131), ಚಿತ್ರದುರ್ಗ (31), ದಕ್ಷಿಣ ಕನ್ನಡ (302) ಶಿವಮೊಗ್ಗ (145) ಮತ್ತು ಚಿಕ್ಕಮಗಳೂರಿನಲ್ಲಿ (107) ನೂರಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT