ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: ಇಳಿಕೆಯಾಗಿದ್ದ ಕೋವಿಡ್ ಮರಣ ದರ ಏರಿಕೆ

Last Updated 30 ಜೂನ್ 2021, 19:21 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಸೋಂಕಿತರಲ್ಲಿ 111 ಮಂದಿ ಮೃತಪಟ್ಟಿರುವುದು ಬುಧವಾರ ದೃಢಪಟ್ಟಿದೆ. ಇದರಿಂದಾಗಿ ಈವರೆಗೆ ಕೋವಿಡ್‌ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 35 ಸಾವಿರ ದಾಟಿದೆ.

ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಕೋವಿಡ್ ಮರಣ ಪ್ರಕರಣಗಳು ನೂರರ ಗಡಿಯೊಳಗೆ ವರದಿಯಾಗಿದ್ದವು. ಮರಣ ಪ್ರಮಾಣ ದರವು ಶೇ 3.28ಕ್ಕೆ ಏರಿಕೆಯಾಗಿದೆ. ಈ ತಿಂಗಳು 5,950 ಮಂದಿ ಸಾವಿಗೀಡಾಗಿದ್ದಾರೆ. ಹೊಸದಾಗಿ ವರದಿಯಾದ ಕೋವಿಡ್ ಮರಣ ಪ್ರಕರಣಗಳಲ್ಲಿ ಒಂದೂವರೆ ತಿಂಗಳ ಹಿಂದೆ ಮೃತಪಟ್ಟವರು ಕೂಡ ಸೇರಿದ್ದಾರೆ.

ರಾಜ್ಯದಲ್ಲಿ ಹೊಸದಾಗಿ 3,382 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಒಂದು ದಿನದ ಅವಧಿಯಲ್ಲಿ 1.71 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣವು ಶೇ 1.97 ರಷ್ಟು ವರದಿಯಾಗಿದೆ. ಬೆಂಗಳೂರಿನಲ್ಲಿ 813 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 500ರ ಗಡಿಯೊಳಗಡೆ ಇವೆ. ಈ ಸಂಖ್ಯೆ 15 ಜಿಲ್ಲೆಗಳಲ್ಲಿ ಎರಡಂಕಿಯಲ್ಲಿದೆ. ಈವರೆಗೆ ಕೋವಿಡ್ ಪೀಡಿತರಾದವರ ಒಟ್ಟು ಸಂಖ್ಯೆ 28.43 ಲಕ್ಷ ದಾಟಿದೆ.

ರಾಜ್ಯದ 25 ಜಿಲ್ಲೆಗಳಲ್ಲಿ ಹೊಸದಾಗಿ ಮರಣ ಪ್ರಕರಣಗಳು ದೃಢಪಟ್ಟಿವೆ. ದಕ್ಷಿಣ ಕನ್ನಡದಲ್ಲಿ 15, ಮೈಸೂರಿನಲ್ಲಿ 14, ದಾವಣಗೆರೆಯಲ್ಲಿ 12ಹಾಗೂ ಬೆಂಗಳೂರಿನಲ್ಲಿ 11 ಮಂದಿ ಮೃತಪಟ್ಟಿದ್ದಾರೆ. ಉಳಿದಜಿಲ್ಲೆಗಳಲ್ಲಿ 10ಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ಮರಣ ಪ್ರಕರಣಗಳು ವರದಿಯಾಗಿವೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 76,505ಕ್ಕೆ ಇಳಿಕೆಯಾಗಿದೆ. ಸೋಂಕಿತರಲ್ಲಿ 12,763 ಮಂದಿಗೆ ಕಾಯಿಲೆವಾಸಿಯಾಗಿದೆ. ಈವರೆಗೆ ಗುಣಮುಖರಾದವರ ಒಟ್ಟು ಸಂಖ್ಯೆ 27.32 ಲಕ್ಷ ದಾಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT