ಮಂಗಳವಾರ, ಮೇ 17, 2022
29 °C

Covid-19 Karnataka Update: 350 ಮಂದಿ ಚೇತರಿಕೆ, 328 ಹೊಸ ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಸೋಮವಾರದಂದು ಹೊಸತಾಗಿ 328 ಕೋವಿಡ್-19 ಸೋಂಕು ಪ್ರಕರಣಗಳು ದಾಖಲಾಗಿದೆ. ಇದರೊಂದಿಗೆ ಖಚಿತ ಪ್ರಕರಣಗಳ ಒಟ್ಟು ಸಂಖ್ಯೆ 9,42,846ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ವರದಿ ಮಾಡಿದೆ. 

ಅದೇ ಹೊತ್ತಿಗೆ ಕಳೆದ 24 ತಾಸಿನಲ್ಲಿ 350 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಇದುವರೆಗೆ ಒಟ್ಟು 9,24,654 ಮಂದಿ ಕೋವಿಡ್-19 ರೋಗದಿಂದ ಚೇತರಿಸಿದ್ದಾರೆ. 

ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಕ್ರಿಯ ಪ್ರಕರಣಗಳ ಸಂಖ್ಯೆ 5934ಕ್ಕೆ ಇಳಿದಿದೆ.   

ಇದನ್ನೂ ಓದಿ: 

ಏತನ್ಮಧ್ಯೆ ಮೂವರು ಮೃತಪಟ್ಟಿದ್ದು, ಇದುವರೆಗೆ 12,239 ಮಂದಿ ಸಾವನ್ನಪ್ಪಿದ್ದಾರೆ. ಐ.ಸಿ.ಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ 143 ಆಗಿದೆ. 

ಬೆಂಗಳೂರು ನಗರದಲ್ಲಿ ಇಂದು 127 ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 400692ಕ್ಕೆ ತಲುಪಿದೆ. ಹಾಗೆಯೇ 126 ಬಿಡುಗಡೆ ಹೊಂದಿದ್ದು, ಇದುವರೆಗೆ 392389 ಮಂದಿ ಚೇತರಿಸಿದ್ದಾರೆ. ಇನ್ನು ನಗರದಲ್ಲಿ ಸಕ್ರಿಯ ಪ್ರಕರಣಗಳು 3896ಕ್ಕೆ ಇಳಿಕೆಯಾಗಿದೆ. 24 ತಾಸಿನಲ್ಲಿ ಇಬ್ಬರು ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 4406ಕ್ಕೆ ತಲುಪಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು