ಸೋಮವಾರ, ಜನವರಿ 25, 2021
21 °C

Covid-19 Karnataka Update: 797 ಮಂದಿ ರೋಗಮುಕ್ತಿ, 496 ಹೊಸ ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ 24 ತಾಸಿನಲ್ಲಿ ಹೊಸತಾಗಿ 496 ಪ್ರಕರಣಗಳು ದಾಖಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. 

ಇದರೊಂದಿಗೆ ಕೋವಿಡ್-19 ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 9344ಕ್ಕೆ ತಲುಪಿದೆ.  

ಇಂದು ಆಸ್ಪತ್ರೆಯಿಂದ 797 ಮಂದಿ ಬಿಡುಗಡೆ ಹೊಂದಿದ್ದಾರೆ. ಇದರೊಂದಿಗೆ 906548 ಮಂದಿ ರೋಗಮುಕ್ತಿಯನ್ನು ಪಡೆದಿದ್ದಾರೆ. 

ಇನ್ನು ನಾಲ್ಕು ಮಂದಿ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 12144ಕ್ಕೆ ಏರಿಕೆಯಾಗಿದೆ. 

ಅಂದ ಹಾಗೆ ರಾಜ್ಯದಲ್ಲಿ ಇದವರೆಗೆ ಒಟ್ಟು 928055 ಕೋವಿಡ್-19 ಪ್ರಕರಣಗಳು ದಾಖಲಾಗಿದೆ. 

ಇದನ್ನೂ ಓದಿ: 

ಜನವರಿ 16ರಿಂದ ಕೊರೊನಾ ಲಸಿಕೆ ವಿತರಣೆ ಕಾರ್ಯಕ್ರಮವು ಪ್ರಾರಂಭವಾಗಲಿದೆ. ಇದರ ಪೂರ್ವ ಸಿದ್ಧತೆಯಂತೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೊ ಸಂವಾದ ನಡೆಸಿದರು. ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಹ ಸಭೆಯಲ್ಲಿ ಪಾಲ್ಗೊಂಡರು. 

ಮೊದಲ ಹಂತದಲ್ಲಿ 6.3 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ರಾಜ್ಯ ಸಜ್ಜಾಗಿದೆ ಎಂದು ಆರೋಗ್ಯಸಚಿವ ಡಾ. ಸುಧಾಕರ್ ಕೆ ಮಾಹಿತಿ ನೀಡಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು