Covid-19 Karnataka Update: ರಾಜ್ಯದಲ್ಲಿ 676 ಮಂದಿ ರೋಗಮುಕ್ತಿ

ಬೆಂಗಳೂರು: ಕೋವಿಡ್-19 ಲಸಿಕೆ ವಿತರಣೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರದಂದು ಚಾಲನೆ ನೀಡಿದರು. ರಾಜ್ಯದಲ್ಲಿ ಕೋವಿಡ್-19 ಲಸಿಕೆ ವಿತರಣೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಸಿದರು.
ರಾಜ್ಯದಲ್ಲಿ ಶನಿವಾರದಂದು ಹೊಸತಾಗಿ 584 ಕೋವಿಡ್-19 ಸೋಂಕು ಪ್ರಕರಣಗಳು ಕಂಡುಬಂದಿದೆ. ಇದರೊಂದಿಗೆ ಖಚಿತ ಪ್ರಕರಣಗಳ ಒಟ್ಟು ಸಂಖ್ಯೆ 9,31,252ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ವರದಿ ಮಾಡಿದೆ.
ಅದೇ ಹೊತ್ತಿಗೆ ಕಳೆದ 24 ತಾಸಿನಲ್ಲಿ 676 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಇದುವರೆಗೆ ಒಟ್ಟು 9,10,377 ಮಂದಿ ಕೋವಿಡ್-19 ರೋಗದಿಂದ ಚೇತರಿಸಿದ್ದಾರೆ.
ಇದನ್ನೂ ಓದಿ: ಕೋವಿಡ್ ಲಸಿಕೆ ವಿತರಣೆಗೂ ವಕ್ರದೃಷ್ಟಿ: ಕೇಂದ್ರ ಗೃಹ ಸಚಿವ ಅಮಿತ್ ಶಾ
ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಕ್ರಿಯ ಪ್ರಕರಣಗಳ ಸಂಖ್ಯೆ 8,694ಕ್ಕೆ ಇಳಿದಿದೆ.
ಇಂದಿನ 16/01/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/bflkXLrIAm pic.twitter.com/V0f2EPDMFB
— K'taka Health Dept (@DHFWKA) January 16, 2021
ಏತನ್ಮಧ್ಯೆ ನಾಲ್ವರು ಮೃತಪಟ್ಟಿದ್ದು, ಇದುವರೆಗೆ 12,162 ಮಂದಿ ಸಾವನ್ನಪ್ಪಿದ್ದಾರೆ. ಐ.ಸಿ.ಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ 181 ಆಗಿದೆ.
ಬೆಂಗಳೂರು ನಗರದಲ್ಲಿ ಇಂದು 282 ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,94,495ಕ್ಕೆ ತಲುಪಿದೆ. ಹಾಗೆಯೇ 292 ಬಿಡುಗಡೆ ಹೊಂದಿದ್ದು, ಇದುವರೆಗೆ 3,84,437 ಮಂದಿ ಚೇತರಿಸಿದ್ದಾರೆ. ಇನ್ನು ನಗರದಲ್ಲಿ ಸಕ್ರಿಯ ಪ್ರಕರಣಗಳು 5,698ಕ್ಕೆ ಇಳಿಕೆಯಾಗಿದೆ. 24 ತಾಸಿನಲ್ಲಿ ಇಬ್ಬರು ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 4,359ಕ್ಕೆ ತಲುಪಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.