ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ 12 ದಿನಗಳಲ್ಲಿ ಲಕ್ಷ ಕೋವಿಡ್‌ ಪ್ರಕರಣ

Last Updated 12 ಸೆಪ್ಟೆಂಬರ್ 2020, 16:28 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ 9,140 ಮಂದಿ ಕೋವಿಡ್ ಪೀಡಿತರಾಗಿರುವುದು ಶನಿವಾರ ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 4.49 ಲಕ್ಷ ತಲುಪಿದೆ.

ಒಂದೇ ದಿನ 63,583 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ 37.14 ಲಕ್ಷ ಮಂದಿ ಪ‍ರೀಕ್ಷೆ ಮಾಡಿಸಿಕೊಂಡಿದ್ದಾರೆ. ಈ ತಿಂಗಳು ಪ್ರತಿನಿತ್ಯ ಸರಾಸರಿ 60 ಸಾವಿರ ಪರೀಕ್ಷೆ ನಡೆಸಲಾಗಿದೆ. ಇದರಿಂದಾಗಿ ಪ್ರಕರಣಗಳು ಕೂಡ ಬಹುತೇಕ ದಿನ 9 ಸಾವಿರದ ಗಡಿ ದಾಟುತ್ತಿದೆ. 12 ದಿನಗಳಲ್ಲಿ 1,07,138 ಮಂದಿ ಸೋಂಕಿತರಾಗಿರುವುದು ದೃಢ‍ಪಟ್ಟಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 8,928 ಮಂದಿ ಕೋವಿಡ್‌ ಪೀಡಿತರಾಗಿದ್ದಾರೆ. ರಾಜ್ಯದಲ್ಲಿ ಸೋಂಕು ದೃಢ ಪ್ರಮಾಣ ಶೇ 12.06ಕ್ಕೆ ಏರಿಕೆಯಾಗಿದೆ.

ಕೊರೊನಾ ಸೋಂಕಿತರಲ್ಲಿ ಬೆಂಗಳೂರಿನಲ್ಲಿ 3,538 ಮಂದಿ ಸೇರಿದಂತೆ ರಾಜ್ಯದಲ್ಲಿ 9,557 ಮಂದಿಗೆ ಕಾಯಿಲೆ ವಾಸಿಯಾಗಿದೆ. 48 ಗಂಟೆಗಳ ಅವಧಿಯಲ್ಲಿ 22,102 ಮಂದಿ ಚೇತರಿಸಿಕೊಂಡಿದ್ದಾರೆ. ಪರಿಣಾಮ ರಾಜ್ಯದಲ್ಲಿ ಈವರೆಗೆ ಗುಣಮುಖರಾದವರ ಸಂಖ್ಯೆ 3.44 ಲಕ್ಷಕ್ಕೆ ಏರಿಕೆಯಾಗಿದೆ. ಒಂದು ಲಕ್ಷ ದಾಟಿದ್ದ ಸಕ್ರಿಯ ಪ್ರಕರಣಗಳ ಸಂಖ್ಯೆ 97 ಸಾವಿರಕ್ಕೆ ಇಳಿಕೆಯಾಗಿದ್ದು, ಸೋಂಕಿತರು ಆಸ್ಪತ್ರೆಗಳು ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಾಗುವ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಸದ್ಯ 795 ರೋಗಿಗಳು ಐಸಿಯುನಲ್ಲಿ ಇದ್ದಾರೆ.

ಬೆಂಗಳೂರಿನಲ್ಲಿ ಹೊಸದಾಗಿ 3,552 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 1.67 ಲಕ್ಷ ದಾಟಿದೆ. ಮೈಸೂರಿನಲ್ಲಿ ಮತ್ತೆ 637 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಅಲ್ಲಿ ಒಟ್ಟು ಸೋಂಕಿತರ ಸಂಖ್ಯೆ 25 ಸಾವಿರ ದಾಟಿದೆ. ದಕ್ಷಿಣ ಕನ್ನಡದಲ್ಲಿ ಹೊಸದಾಗಿ 401 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಅಲ್ಲಿ ಒಟ್ಟು ಸೋಂಕಿತರ ಸಂಖ್ಯೆ 16,959ಕ್ಕೆ ಏರಿಕೆಯಾಗಿದೆ. ಬಳ್ಳಾರಿ (366), ಹಾಸನ (324), ತುಮಕೂರು (304) ಜಿಲ್ಲೆಗಳಲ್ಲಿಯೂ ಅಧಿಕ ಪ್ರಕರಣಗಳು ಹೊಸದಾಗಿ ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT