ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: ರಾಜ್ಯದಲ್ಲಿ 2 ಲಕ್ಷ ದಾಟಿದ ಕೊರೊನಾ ಸೋಂಕಿತರು

Last Updated 13 ಆಗಸ್ಟ್ 2020, 17:32 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ರಾಜ್ಯದಲ್ಲಿ ಮತ್ತೆ 6,706 ಮಂದಿ ಕೋವಿಡ್ ಪೀಡಿತರಾಗಿದ್ದು ಗುರುವಾರ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಮೊದಲ ಕೋವಿಡ್ ಪ್ರಕರಣ ವರದಿಯಾಗಿ ಆರು ತಿಂಗಳು ಕಳೆಯುವುದರೊಳಗೆ ಸೋಂಕಿತರ ಸಂಖ್ಯೆ 2 ಲಕ್ಷ ದಾಟಿದೆ.

ಮಾ.8ರಂದು ರಾಜ್ಯದಲ್ಲಿ ಪ್ರಥಮ ಕೋವಿಡ್ ಪ್ರಕರಣ ವರದಿಯಾಗಿತ್ತು. ನಾಲ್ಕು ಹಂತಗಳ ಲಾಕ್‌ಡೌನ್‌ ಅಂತ್ಯವಾಗುವ ವೇಳೆ ಮಹಾರಾಷ್ಟ್ರ, ದೆಹಲಿ ಸೇರಿದಂತೆ ದೇಶದ ಕೆಲ ರಾಜ್ಯಗಳಲ್ಲಿ ಪ್ರಕರಣಗಳು ಏರುಗತಿ ಕಂಡಿದ್ದರೂ ರಾಜ್ಯದಲ್ಲಿ ಮಾತ್ರ ನಿಯಂತ್ರಣದಲ್ಲಿತ್ತು. ಆ ವೇಳೆಗೆ ಇಲ್ಲಿ 3,221 ಮಂದಿ ಮಾತ್ರ ಸೋಂಕಿತರಾಗಿದ್ದರು. ಹೀಗಾಗಿಯೇ ಕೇಂದ್ರ ಆರೋಗ್ಯ ಸಚಿವಾಲಯ ಕೂಡ ಇಲ್ಲಿ ಕೈಗೊಂಡ ಮುಂಜಾಗ್ರತಾ ಕ್ರಮಗಳಿಗೆ ಮೆಚ್ಚುಗೆ ವ್ಯಕ್ತಿಪಡಿಸಿ, ಉಳಿದ ರಾಜ್ಯಗಳಿಗೆ ಅನುಸರಿಸಲು ಸೂಚಿಸಿತ್ತು. ಆದರೆ, ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಸಿದಂತೆ ಸೋಂಕು ಹರಡುವಿಕೆ ವೇಗ ಪಡೆದುಕೊಂಡಿತು.

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1 ಲಕ್ಷದ ಗಡಿ ತಲುಪಲು 141 ದಿನಗಳು ತಗುಲಿದ್ದವು. ಆದರೆ, ನಂತರದ 1 ಲಕ್ಷ ಪ್ರಕರಣಗಳು 17 ದಿನಗಳಲ್ಲಿ ದೃಢಪಟ್ಟಿವೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 6 ಸಾವಿರ ಪ್ರಕರಣಗಳು ಖಚಿತಪಟ್ಟಿವೆ. ಸದ್ಯ ರಾಜ್ಯದಲ್ಲಿ ಸೋಂಕು ದೃಢ ಪ್ರಮಾಣ ಶೇ 10.76ರಷ್ಟಿದೆ. ಪರಿಣಾಮ ಅಧಿಕ ಸಕ್ರಿಯ ಪ್ರಕರಣಗಳನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ತಮಿಳುನಾಡನ್ನು ರಾಜ್ಯ ಹಿಂದಿಕ್ಕಿದ್ದು, 78 ಸಾವಿರಕ್ಕೂ ಅಧಿಕ ಸೋಂಕಿತರು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅಧಿಕ ಕೋವಿಡ್‌ ಪೀಡಿತರನ್ನು ಹೊಂದಿರುವ ರಾಜ್ಯಗಳಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು, ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದೆ.

103 ಮಂದಿ ಸಾವು: ಕೊರೊನಾ ಸೋಂಕಿತರಲ್ಲಿ ಬೆಂಗಳೂರಿನಲ್ಲಿ 22 ಮಂದಿ ಸೇರಿದಂತೆ ರಾಜ್ಯದಲ್ಲಿ ಮತ್ತೆ 103 ಮಂದಿ ಮೃತಪಟ್ಟಿರುವುದು ಖಚಿತಪಟ್ಟಿದ್ದು, ಕೋವಿಡ್‌ಗೆ ಸಾವಿಗೀಡಾದವರ ಸಂಖ್ಯೆ 3,613ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT