ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update | ICUನಲ್ಲಿ 892 ಜನ, ಸೋಂಕಿತರು ಸಂಖ್ಯೆ 7 ಲಕ್ಷ

Last Updated 10 ಅಕ್ಟೋಬರ್ 2020, 15:01 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೇವಲ 892 ಕೋವಿಡ್‌ ಪೀಡಿತರು ಮಾತ್ರ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಶನಿವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ ಹೊಸದಾಗಿ 10,517 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ಪತ್ತೆಯಾಗಿದ್ದು, 1ಒ8 ಜನರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 7,00786ಕ್ಕೆ ಏರಿಕೆಯಾಗಿದೆ. ಒಟ್ಟಾರೆ 9,891 ಜನರು ಮೃತಪಟ್ಟಿದ್ದಾರೆ.

ಇಲ್ಲಿಯವರೆಗೂ 569947 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 1,20,929 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಇಂದು ಗುಣಮುಖರಾಗಿ 8337 ಜನರು ಬಿಡುಗಡೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಇಂದು ಹೊಸದಾಗಿ 4563 ಜನರಿಗೆ ಸೋಂಕು ತಗುಲಿದ್ದು, ಒಟ್ಟಾರೆ 2,08,702 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 2,76,934 ಲಕ್ಷದ ಗಡಿ ದಾಟಿದೆ. ಇಂದು 30 ಜನರು ಮೃತಪಟ್ಟಿದ್ದು, ಈವರೆಗೂ 3,320 ಮಂದಿ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT