ಸೋಮವಾರ, ಸೆಪ್ಟೆಂಬರ್ 27, 2021
28 °C

Covid-19 Karnataka Update: ರಾಜ್ಯದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರದಂದು 967 ಕೋವಿಡ್‌ ಸೋಂಕು ಪ್ರಕರಣಗಳು ದೃಢಪಟ್ಟಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಗುರುವಾರದಂದು 1,000ಕ್ಕೂ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಿದ್ದವು. ಈ ಮೂಲಕ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ ಕಂಡಿದೆ. 

ರಾಜ್ಯದಲ್ಲಿ ಕೋವಿಡ್-19 ಖಚಿತ ಪ್ರಕರಣಗಳ ಒಟ್ಟು ಸಂಖ್ಯೆ 29,60,131ಕ್ಕೆ ತಲುಪಿದೆ. 

ಕಳೆದ 24 ತಾಸಿನ ಅವಧಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಇಂದಿನವರೆಗೆ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 37,472 ಆಗಿದೆ. 

ಶುಕ್ರವಾರದಂದು ಆಸ್ಪತ್ರೆಯಿಂದ 921 ಮಂದಿ ಬಿಡುಗಡೆ ಹೊಂದಿದ್ದಾರೆ. ಆ ಮೂಲಕ ಇದುವರೆಗೆ 29,05,604 ಮಂದಿ ಕೊರೊನಾ ವೈರಾಣುವಿನಿಂದ ಮುಕ್ತಿ ಪಡೆದಿದ್ದಾರೆ. 

ರಾಜ್ಯದಲ್ಲಿ 17,028 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ. 0.57 ರಷ್ಟಿದ್ದು, ಮರಣ ಪ್ರಮಾಣ ಶೇ. 1.03 ಆಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲೂ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಇಂದು 310 ಮಂದಿಯಲ್ಲಿ ಸೋಂಕು ದೃಢಪಟ್ಟಿವೆ. ಇನ್ನುಳಿದಂತೆ ದಕ್ಷಿಣ ಕನ್ನಡ 141, ಉಡುಪಿ 96, ಕೊಡಗು 74, ಹಾಸನ 61 ಮತ್ತು ಮೈಸೂರು ಜಿಲ್ಲೆಯಲ್ಲಿ 55 ಹೊಸ ಪ್ರಕರಣಗಳು ವರದಿಯಾಗಿವೆ.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು