ಬೆಂಗಳೂರು: ರಾಜ್ಯದಲ್ಲಿ 8,818 ಮಂದಿ ಕೋವಿಡ್ ಪೀಡಿತರಾಗಿರುವುದು ಶನಿವಾರ ದೃಢಪಟ್ಟಿದೆ. ಇದೇ ಮೊದಲ ಬಾರಿಗೆ ಪ್ರಕರಣಗಳ ಸಂಖ್ಯೆ 24 ಗಂಟೆಗಳ ಅವಧಿಯಲ್ಲಿ 8 ಸಾವಿರದ ಗಡಿ ದಾಟಿದ್ದು, ಸೋಂಕಿತರ ಸಂಖ್ಯೆ 2.19 ಲಕ್ಷಕ್ಕೆ ಏರಿಕೆಯಾಗಿದೆ.

48 ಗಂಟೆಗಳಲ್ಲಿ 16,726 ಮಂದಿ ಸೋಂಕಿತರಾಗಿರುವುದು ಖಚಿತಪಟ್ಟಿದೆ. ಸೋಂಕಿತರಲ್ಲಿ ಮತ್ತೆ 114 ಮಂದಿ ಮೃತಪಟ್ಟಿದ್ದು, ಸಾವಿಗೀಡಾದವರ ಸಂಖ್ಯೆ 3,831ಕ್ಕೆ ಏರಿಕೆಯಾಗಿದೆ. 15 ದಿನಗಳಲ್ಲಿ ಪ್ರತಿನಿತ್ಯ ಸರಾಸರಿ 101 ಮಂದಿ ಮರಣ ಹೊಂದಿರುವುದು ದೃಢಪಟ್ಟಿದೆ.

ಚೇತರಿ ಸಿಕೊಳ್ಳುವವರ ಸಂಖ್ಯೆಯಲ್ಲಿಯೂ ಏರಿಕೆ ಕಾಣುತ್ತಿದ್ದು, ಬೆಂಗಳೂರಿನಲ್ಲಿ 2,034 ಮಂದಿ ಸೇರಿದಂತೆ ರಾಜ್ಯದಲ್ಲಿ 6,629 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ರಾಜ್ಯದಲ್ಲಿ ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 1.34 ಲಕ್ಷ ದಾಟಿದೆ. 81 ಸಾವಿರಕ್ಕೂ ಅಧಿಕ ಸೋಂಕಿತರು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಒಂದೇ ದಿನ 54,806 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ: ಬೆಂಗಳೂರಿನಲ್ಲಿ ಹೊಸದಾಗಿ 3,495 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 87 ಸಾವಿರ ದಾಟಿದೆ. ಬಳ್ಳಾರಿ (759), ಮೈಸೂರು (635), ಬೆಳಗಾವಿ (358), ದಾವಣಗೆರೆ (327), ದಕ್ಷಿಣ ಕನ್ನಡ (271), ಉಡುಪಿ (241), ಧಾರವಾಡ (239), ವಿಜಯಪುರ (232) ಜಿಲ್ಲೆಯಲ್ಲಿಯೂ ಅಧಿಕ ಪ್ರಕರಣಗಳು ಹೊಸದಾಗಿ ವರದಿಯಾಗಿವೆ.

ಶನಿವಾರ ದೃಢಪಟ್ಟ ಮರಣ ಪ್ರಕರಣಗಳಲ್ಲಿ 28 ಮಂದಿ 50 ವರ್ಷದೊಳಗಿನವರಾಗಿದ್ದಾರೆ.

ಇದರಲ್ಲಿ ರಾಯಚೂರಿನ 25 ವರ್ಷದ ಯುವತಿ ಹಾಗೂ ಬೆಂಗಳೂರಿನ 28 ವರ್ಷದ ಯುವಕ ಕೂಡ ಸೇರಿದ್ದಾರೆ. ಬೆಂಗಳೂರು (35), ಮೈಸೂರು (10), ಧಾರವಾಡ (7) ಜಿಲ್ಲೆಯಲ್ಲಿ ಅಧಿಕ ಮಂದಿ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.