ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Covid Update | 268 ಹೊಸ ಕೋವಿಡ್‌ ಪ್ರಕರಣಗಳು, 14 ಸಾವು

Last Updated 28 ಫೆಬ್ರುವರಿ 2022, 17:02 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಸೋಮವಾರ ಮತ್ತಷ್ಟು ಇಳಿಕೆಯಾಗಿದೆ. 5623 ಸೋಂಕಿತರು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆಯೂ 268ಕ್ಕೆ ಇಳಿಕೆಯಾಗಿದೆ. ಸೋಂಕು ದೃಢ ಪ್ರಮಾಣ ಶೇ 0.70ಕ್ಕೆ ಇಳಿಕೆಯಾಗಿದೆ.

ಬಾಗಲಕೋಟೆ, ಗದಗ, ಹಾವೇರಿ, ಮಂಡ್ಯ, ರಾಯಚೂರು, ರಾಮನಗರ, ಯಾದಗಿರಿ ಜಿಲ್ಲೆಗಳಲ್ಲಿ ಸೋಂಕು ಪ್ರಕರಣಗಳು ವರದಿಯಾಗಿಲ್ಲ. 18 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಒಂದಂಕಿಗೆ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ 161 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ. ಈವರೆಗೆ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 39.41 ಲಕ್ಷಕ್ಕೆ ಏರಿಕೆಯಾಗಿದೆ.

ಸೋಂಕಿತರ ಪೈಕಿ ಬೆಂಗಳೂರಿನಲ್ಲಿ 550 ಮಂದಿ ಸೇರಿದಂತೆ ರಾಜ್ಯದಲ್ಲಿ 1119 ಮಂದಿ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಈವರೆಗೆ ಗುಣಮುಖರಾದವರ ಒಟ್ಟು ಸಂಖ್ಯೆ 38.95 ಲಕ್ಷಕ್ಕೆ ತಲುಪಿದೆ.

ಕೊರೊನಾ ಸೋಂಕಿತರಲ್ಲಿ 14 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ 10 ಮತ್ತು ಬಳ್ಳಾರಿ, ಹಾಸನ, ಕೊಪ್ಪಳ, ಮಂಡ್ಯದಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ. ರಾಜ್ಯದಲ್ಲಿ ಮರಣ ಪ್ರಮಾಣ ದರವು ಶೇ 5.22 ರಷ್ಟು ವರದಿಯಾಗಿದೆ. ಈವರೆಗೆಕೋವಿಡ್‌ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 39,950ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT