ಸೋಮವಾರ, ಜನವರಿ 17, 2022
20 °C

Covid Karnataka Update| ರಾಜ್ಯದಲ್ಲಿ ಇಂದು 12,000 ಕೋವಿಡ್‌ ಪ್ರಕರಣಗಳು ಪತ್ತೆ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಇಂದು 12,000 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರು ನಗರವೊಂದರಲ್ಲೇ 9,020 ಸೋಂಕಿತರು ಪತ್ತೆಯಾಗಿದ್ದಾರೆ.

ಇನ್ನು ಈ 24 ಗಂಟೆಗಳಲ್ಲಿ 4 ಮಂದಿ ಮೃತಪಟ್ಟಿದ್ದಾರೆ. 901 ಮಂದಿ ಚೇತರಿಸಿಕೊಂಡಿದ್ದಾರೆ. ಸೋಂಕು ಪ್ರಕರಣಗಳು ವಾರದಿಂದೀಚೆಗೆ ನಿತ್ಯವೂ ಏರಿಕೆಯಾಗುತ್ತಿರುವುದರಿಂದ ರಾಜ್ಯದ ಪಾಸಿಟಿವಿಟಿ ದರ ಶೇ 6.33ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪಾಸಿಟಿವಿಟಿ ದರ ಶೇ 10ಕ್ಕೆ ತಲುಪಿದೆ.

ಸದ್ಯ ರಾಜ್ಯದಲ್ಲಿ 49,602 ಸಕ್ರಿಯ ಪ್ರಕರಣಗಳಿದ್ದು, ಬೆಂಗಳೂರಿನಲ್ಲೇ 40 ಸಾವಿರ ಪ್ರಕರಣಗಳಿವೆ.

ಕಳೆದ ಒಂದು ದಿನದಲ್ಲಿ 1,89,499 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಆರೋಗ್ಯ ಇಲಾಖೆ ನೀಡಿರುವ ಅಂಕಿಅಂಶಗಳಿಂದ ಗೊತ್ತಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು