ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: 1,229 ಹೊಸ ಪ್ರಕರಣ, 13 ಸೋಂಕಿತರು ಸಾವು

Last Updated 28 ಆಗಸ್ಟ್ 2021, 13:43 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಶನಿವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ 1,229 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 13 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 29,45,993ಕ್ಕೆ ಏರಿಕೆಯಾಗಿದ್ದು, ಆ ಪೈಕಿ 37,261 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.

ಇಂದು ಆಸ್ಪತ್ರೆಗಳಿಂದ ಬಿಡುಗಡೆಯಾದ 1,289 ಮಂದಿಯೂ ಸೇರಿದಂತೆ ಇದುವರೆಗೆ ಒಟ್ಟು 28,89,809 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 18,897 ಸಕ್ರಿಯ ಪ್ರಕರಣಗಳಿವೆ.

ರಾಜಧಾನಿ ಬೆಂಗಳೂರಿನಲ್ಲಿ 310 ಮತ್ತು ದಕ್ಷಿಣ ಕನ್ನಡದಲ್ಲಿ 207 ಪ್ರಕರಣಗಳು ವರದಿಯಾಗಿವೆ. ಉಳಿದಂತೆ ಉಡುಪಿಯಲ್ಲಿ 146, ಹಾಸನದಲ್ಲಿ 103 ಪ್ರಕರಣಗಳು ವರದಿಯಾಗಿವೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.66ರಷ್ಟಿದ್ದು, ಮರಣ ಪ್ರಮಾಣ ಶೇ. 1.05ರಷ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT