ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: ಪಾಸಿಟಿವಿಟಿ ದರ ಶೇ 1.38, ಸೋಂಕಿನಿಂದ 38 ಸಾವು

Last Updated 3 ಆಗಸ್ಟ್ 2021, 15:02 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 1,674 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 38 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 29,09,958 ಕ್ಕೆ ಏರಿಕೆಯಾಗಿದೆ. ಆ ಪೈಕಿ 36,650 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ 28,49,003 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 26,280 ಸಕ್ರಿಯ ಪ್ರಕರಣಗಳಿವೆ.

ಇಂದು ಬೆಂಗಳೂರು 477, ದಕ್ಷಿಣ ಕನ್ನಡ 307, ಮೈಸೂರು 160, ಹಾಸನ 147, ಚಿಕ್ಕಮಗಳೂರು 61, ಬೆಳಗಾವಿ ಜಿಲ್ಲೆಯಲ್ಲಿ 36 ಮತ್ತು ತುಮಕೂರಿನಲ್ಲಿ 80 ಹೊಸ ಪ್ರಕರಣಗಳು ಪತ್ತೆಯಾಗಿವೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 1.38 ರಷ್ಟಿದ್ದು, ಮರಣ ಪ್ರಮಾಣ ಶೇ 2.27 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT