ಸೋಮವಾರ, ಜೂನ್ 21, 2021
21 °C

Covid-19 Karnataka Update: ರಾಜ್ಯದಲ್ಲಿ 49,058 ಹೊಸ ಪ್ರಕರಣಗಳು ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಕೋವಿಡ್-19 ಹೊಸ ಪ್ರಕರಣಗಳು ವರದಿಯಾಗಿರುವ ಸಂಖ್ಯೆ 49,058 ಆಗಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇಂದು ಕೋವಿಡ್-19 ಸೋಂಕಿನಿಂದ 328 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ ಕೊರೊನಾವೈರಸ್‌ನಿಂದಾಗಿ ಮೃತಪಟ್ಟವರ ಒಟ್ಟು ಸಂಖ್ಯೆ 17,212 ಆಗಿದೆ. 

ಒಟ್ಟು ಸಕ್ರಿಯ ಪ್ರಕರಣಗಳು: 5,17,075

ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 5,17,075 ಆಗಿದೆ. ಹಾಗೆಯೇ ಇಂದು 18,943 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 

ಇದರೊಂದಿಗೆ ಒಟ್ಟು ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುವವರ ಸಂಖ್ಯೆ 12,55,797ಕ್ಕೆ ತಲುಪಿದೆ. 

ರಾಜ್ಯದಲ್ಲಿ ಕೊರೊನಾ ವೈರಸ್ ಖಚಿತ ಪ್ರಕರಣಗಳ ಒಟ್ಟು ಸಂಖ್ಯೆ 17,90,104 ಆಗಿದೆ. ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ ಶೇ 29.83ರಷ್ಟಾಗಿದೆ.

ಇಂದು ಬೆಂಗಳೂರಿನಲ್ಲಿ ಕೊರೊನಾ ವೈರಸ್‌ ಸೋಂಕು ದೃಢಪಟ್ಟ 23,706 ಪ್ರಕರಣಗಳು ವರದಿಯಾಗಿದ್ದು, 139 ಮಂದಿ ಸಾವಿಗೀಡಾಗಿದ್ದಾರೆ.  

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು