ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಏರಿಕೆ

Last Updated 12 ಜೂನ್ 2022, 3:09 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌-19 ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಯಾಗಿದ್ದು, ಶನಿವಾರ 562 ಪ್ರಕರಣಗಳು ದೃಢಪಟ್ಟಿವೆ. ಆದರೆ, ಸೋಂಕು ದೃಢ ಪ್ರಮಾಣ ಇಳಿಕೆಯಾಗಿದ್ದು, ಶೇ 2.07ರಷ್ಟು ವರದಿಯಾಗಿವೆ.

ಹತ್ತು ದಿನಗಳಿಂದ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಶುಕ್ರವಾರ 525, ಗುರುವಾರ 471 ಪ್ರಕರಣ ದೃಢಪಟ್ಟಿದ್ದವು. ದೃಢ ಪ್ರಮಾಣವು ಕ್ರಮವಾಗಿ ಶೇ 2.31ರಷ್ಟು ಮತ್ತು ಶೇ 2.14ರಷ್ಟಿತ್ತು.

ಬೆಂಗಳೂರು ನಗರದಲ್ಲೇ ಶನಿವಾರ ಅತಿ ಹೆಚ್ಚಿನ 545 ಪ್ರಕರಣ ವರದಿಯಾಗಿವೆ. ಉಳಿದಂತೆ, ಮೈಸೂರಿನಲ್ಲಿ ನಾಲ್ಕು, ದಕ್ಷಿಣ ಕನ್ನಡದಲ್ಲಿ ಮೂರು, ಚಿತ್ರದುರ್ಗದಲ್ಲಿ ಎರಡು ಮತ್ತು ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಹಾಸನ, ತುಮಕೂರು, ಉಡುಪಿ, ಉತ್ತರ ಕನ್ನಡದಲ್ಲಿ ತಲಾ ಒಂದು ಪ್ರಕರಣ ದೃಢಪಟ್ಟಿವೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 3,387ಕ್ಕೆ ಏರಿದೆ. ಇದರಲ್ಲಿ ಬೆಂಗಳೂರಿನಲ್ಲೇ 3,263 ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆಯು ಮಾಹಿತಿ ನೀಡಿದೆ. ಒಂದು ದಿನದಲ್ಲಿ 27,123 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT