ಸೋಮವಾರ, ಆಗಸ್ಟ್ 8, 2022
21 °C

Covid-19 Karnataka Update: 9,579 ಹೊಸ ಪ್ರಕರಣ, 52 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಾದ್ಯಂತ 24 ಗಂಟೆ ಅವಧಿಯಲ್ಲಿ 9,579 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, 52 ಸೋಂಕಿತರು ಅಸುನೀಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

2,767 ಸೋಂಕಿತರು ಇಂದು ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ಈವರೆಗೆ ರಾಜ್ಯದಲ್ಲಿ 10,74,869 ಮಂದಿಗೆ ಸೋಂಕು ತಗುಲಿದ್ದು, 12,941 ಮಂದಿ ಮೃತಪಟ್ಟಿದ್ದಾರೆ. ಒಟ್ಟು 9,85,924 ಸೋಂಕಿತರು ಚೇತರಿಸಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಇಂದು 6,387 ಹೊಸ ಪ್ರಕರಣಗಳು ದೃಢಪಟ್ಟಿದ್ದು, 40 ಮಂದಿ ಸಾವಿಗೀಡಾಗಿದ್ದಾರೆ.

ಉಳಿದಂತೆ, ಬೀದರ್‌ನಲ್ಲಿ 465, ಕಲಬುರ್ಗಿಯಲ್ಲಿ 335, ಮೈಸೂರಿನಲ್ಲಿ 362, ತುಮಕೂರಿನಲ್ಲಿ 239, ಬೆಂಗಳೂರು ಗ್ರಾಮಾಂತರದಲ್ಲಿ 192 ಪ್ರಕರಣಗಳು ದೃಢಪಟ್ಟಿವೆ.

ಓದಿ: Covid-19 India Update: ಕೋವಿಡ್‌ ಪ್ರಕರಣಗಳಲ್ಲಿ ಬ್ರೆಜಿಲ್‌ ಮೀರಿಸಿದ ಭಾರತ!

ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 1,68,912 ಹೊಸ ಪ್ರಕರಣಗಳು ದಾಖಲಾಗಿದ್ದು, 904 ಮಂದಿ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಬೆಳಿಗ್ಗೆ ತಿಳಿಸಿದೆ. ಇದರೊಂದಿಗೆ ಒಟ್ಟು ಪ್ರಕರಣಗಳ ಪಟ್ಟಿಯಲ್ಲಿ ಬ್ರೆಜಿಲ್‌ ಹಿಂದಕ್ಕಿಟ್ಟು ಭಾರತ ಎರಡನೇ ಸ್ಥಾನಕ್ಕೇರಿತ್ತು.

ಹೊಸ ಪ್ರಕರಣಗಳ ಜಿಲ್ಲಾವಾರು ವಿವರ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು