ಶನಿವಾರ, ಅಕ್ಟೋಬರ್ 24, 2020
18 °C

Covid-19 Karnataka Update: 7,606 ಹೊಸ ಪ್ರಕರಣ, 70 ಸಾವು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

Covid-19

ಬೆಂಗಳೂರು: ರಾಜ್ಯದಾದ್ಯಂತ 24 ಗಂಟೆ ಅವಧಿಯಲ್ಲಿ 7,606 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ. 70 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಸಂಜೆ ತಿಳಿಸಿದೆ.

ಈವರೆಗೆ ರಾಜ್ಯದಲ್ಲಿ ಸೋಂಕಿತರಾದವರ ಸಂಖ್ಯೆ 7,17,915ಕ್ಕೆ ಏರಿಕೆಯಾಗಿದ್ದು, 10,036 ಜನ ಸಾವಿಗೀಡಾಗಿದ್ದಾರೆ. 5,92,084 ಸೋಂಕಿತರು ಗುಣಮುಖರಾಗಿದ್ದಾರೆ.

ಇಂದು (ಸೋಮವಾರ) 12,030 ಜನ ಚೇತರಿಸಿಕೊಂಡಿದ್ದಾರೆ. 928 ಸೋಂಕಿತರಿಗೆ ತೀವ್ರ ನಿಗಾ ಘಟಕಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ರಾಜ್ಯಲ್ಲಿ 1,15,776 ಸಕ್ರಿಯ ಪ್ರಕರಣಗಳಿವೆ.

ರಾಜಧಾನಿ ಬೆಂಗಳೂರಿನಲ್ಲಿ ಒಂದೇ ದಿನ 3,498 ಜನರು ಸೋಂಕಿತರಾಗಿದ್ದು, 18 ಮಂದಿ ಅಸುನೀಗಿದ್ದಾರೆ. 64,570 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ಸೋಂಕಿತರ ವಿವರ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು