ಶನಿವಾರ, ಏಪ್ರಿಲ್ 1, 2023
31 °C

Covid-19 Karnataka Update: ರಾಜ್ಯದಲ್ಲಿ 239 ಪ್ರಕರಣ, 5 ಸಾವು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಾದ್ಯಂತ 24 ಗಂಟೆ ಅವಧಿಯಲ್ಲಿ 239 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 5 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಇದರೊಂದಿಗೆ ಈವರೆಗೆ ಸೋಂಕಿತರಾದವರ ಸಂಖ್ಯೆ 29,88,760ಕ್ಕೆ ಏರಿಕೆಯಾಗಿದೆ. 38,089 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. 29,42,272 ಮಂದಿ ಸೋಂಕಿತರು ಈವರೆಗೆ ಗುಣಮುಖರಾಗಿರುವುದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಕಿಅಂಶಗಳಿಂದ ತಿಳಿದುಬಂದಿದೆ.

ಸದ್ಯ ರಾಜ್ಯದಲ್ಲಿ 8,370 ಸಕ್ರಿಯ ಪ್ರಕರಣಗಳಿವೆ. ದೈನಂದಿನ ಕೋವಿಡ್ ದೃಢ ಪ್ರಮಾಣ ಶೇ 0.39ರಷ್ಟಿದೆ.

ಬೆಂಗಳೂರಿನಲ್ಲಿ 139, ಮೈಸೂರಿನಲ್ಲಿ 31, ದಕ್ಷಿಣ ಕನ್ನದಲ್ಲಿ 18 ಪ್ರಕರಣಗಳು ವರದಿಯಾಗಿವೆ.

ತುಮಕೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. 27 ಜಿಲ್ಲೆಗಳಲ್ಲಿ ಹೊಸ ಮರಣ ಪ್ರಕರಣಗಳು ವರದಿಯಾಗಿಲ್ಲ. ಬೆಂಗಳೂರಿನಲ್ಲಿ 34 ವರ್ಷದ ಮಹಿಳೆಯೊಬ್ಬರು ಕೆಮ್ಮು, ಜ್ವರ ಹಾಗೂ ಉಸಿರಾಟದ ಸಮಸ್ಯೆಯಿಂದ ಸಾವಿಗೀಡಾಗಿದ್ದಾರೆ. ಉಳಿದ ನಾಲ್ವರು 70 ವರ್ಷ ಮೇಲ್ಪಟ್ಟವರಾಗಿದ್ದಾರೆ.

ಕೋವಿಡ್‌ ಪರೀಕ್ಷೆಗಳ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ. ಮಂಗಳವಾರ 60,711 ಮಾದರಿಗಳನ್ನಷ್ಟೇ ಪರೀಕ್ಷಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು