ಸೋಮವಾರ, ಜನವರಿ 17, 2022
27 °C

Covid19 Karnataka Update: ರಾಜ್ಯದಲ್ಲಿ ಸಕ್ರಿಯ ಪ್ರಕರಣ 1.41 ಲಕ್ಷಕ್ಕೆ ಏರಿಕೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ 20,121 ಮಂದಿ ಸೇರಿದಂತೆ ರಾಜ್ಯದಲ್ಲಿ 28,723 ಮಂದಿ ಕೊರೊನಾ ಸೋಂಕಿತರಾಗಿರುವುದು ಶುಕ್ರವಾರ ದೃಢಪಟ್ಟಿದೆ. 

ಒಂದು ದಿನದ ಅವಧಿಯಲ್ಲಿ 2.21 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ರಾಜ್ಯದಲ್ಲಿ ಕೋವಿಡ್ ಕಾಣಿಸಿಕೊಂಡಾಗಿನಿಂದ ಈವರೆಗೆ ಒಂದು ದಿನದ ಅವಧಿಯಲ್ಲಿ ನಡೆಸಲಾದ ಗರಿಷ್ಠ ಪರೀಕ್ಷೆಗಳು ಇವಾಗಿವೆ ಸೋಂಕು ದೃಢ ಪ್ರಮಾಣ ಶೇ 12.98 ರಷ್ಟು ವರದಿಯಾಗಿದೆ. ಈ ತಿಂಗಳು 14 ದಿನಗಳಲ್ಲಿ 1,45,901 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 31.53 ಲಕ್ಷಕ್ಕೆ ಏರಿಕೆಯಾಗಿದೆ. 

ಬೆಂಗಳೂರಿನಲ್ಲಿ ಹೊಸ ಪ್ರಕರಣಗಳು ಎಂಟು ತಿಂಗಳ ಬಳಿಕ 20 ಸಾವಿರ ದಾಟಿದೆ. 25 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಮೂರಂಕಿಗೆ ತಲುಪಿದೆ. ಮೈಸೂರಿನಲ್ಲಿ 803, ತುಮಕೂರಿನಲ್ಲಿ 796, ದಕ್ಷಿಣ ಕನ್ನಡದಲ್ಲಿ 639, ಮಂಡ್ಯದಲ್ಲಿ 554 ಹಾಗೂ ಕೋಲಾರದಲ್ಲಿ 502 ಪ್ರಕರಣಗಳು ವರದಿಯಾಗಿವೆ. ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 500ಕ್ಕಿಂತ ಕಡಿಮೆ ಇವೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 1.41 ಲಕ್ಷ ಮುಟ್ಟಿದೆ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 1.09 ಲಕ್ಷಕ್ಕೆ ತಲುಪಿದೆ. ಸೋಂಕಿತರಲ್ಲಿ ಶೇ 93 ರಷ್ಟು ಮಂದಿ ಮನೆ ಆರೈಕೆಗೆ ಒಳದಾದರೆ, ಶೇ 6 ರಷ್ಟು ಮಂದಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಶೇ 1 ರಷ್ಟು ಮಂದಿ ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಪ್ರತ್ಯೇಕವಾಸಕ್ಕೆ ಒಳಗಾಗುತ್ತಿದ್ದಾರೆ. 

ಸೋಂಕಿತರಲ್ಲಿ 3,105 ಮಂದಿ ಚೇತರಿಸಿಕೊಂಡಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 29.73 ಲಕ್ಷ ದಾಟಿದೆ. ಕೋವಿಡ್ ಪೀಡಿತರಲ್ಲಿ ಬೆಂಗಳೂರಿನಲ್ಲಿ ಏಳು ಮಂದಿ, ಬೆಂಗಳೂರು ಗ್ರಾಮಾಂತರದಲ್ಲಿ ಮೂವರು, ಮೈಸೂರಿನಲ್ಲಿ ಇಬ್ಬರು, ಮಂಡ್ಯ ಹಾಗೂ ಚಿಕ್ಕಬಳ್ಳಾಪುರದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಮರಣ ಪ್ರಮಾಣ ದರವು ಶೇ 0.04 ರಷ್ಟು ವರದಿಯಾಗಿದೆ. ಈವರೆಗೆ ಕೋವಿಡ್‌ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 38,411ಕ್ಕೆ ಏರಿಕೆಯಾಗಿದೆ. 

l ಮೇಕೆದಾಟು ಪಾದಯಾತ್ರೆಯ ಬಂದೋಬಸ್ತ್‌ಗೆ ತೆರಳಿದ್ದ ಕೋಲಾರ ಜಿಲ್ಲೆಯ ಆರು ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌ ಸೇರಿದಂತೆ 25 ಪೊಲೀಸರಿಗೆ ಶುಕ್ರವಾರ ಕೋವಿಡ್ ದೃಢಪಟ್ಟಿದೆ.

l ಕಲಬುರಗಿಯ ಕೋಟನೂರ (ಡಿ) ಬಳಿ ಇರುವ ಕೇಂದ್ರೀಯ ವಿದ್ಯಾಲಯದ ಏಳು ಶಿಕ್ಷಕರು ಹಾಗೂ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್‌ ದೃಢಪಟ್ಟಿದೆ.

l ದಾವಣಗೆರೆ ಜಿಲ್ಲೆಯ ಮಲೇಬೆನ್ನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಇರುವುದು ಗುರುವಾರ ರಾತ್ರಿ ದೃಢಪಟ್ಟಿದೆ.

l ಚಿತ್ರದುರ್ಗದ ವಿವೇಕಾನಂದ ಸ್ಕೂಲ್‌ ಆಫ್‌ ನರ್ಸಿಂಗ್‌ ಹಾಸ್ಟೆಲ್‌ನ 22 ವಿದ್ಯಾರ್ಥಿಗಳಲ್ಲಿ ಹಾಗೂ ಅಂಚೆ ಇಲಾಖೆಯ ಪ್ರಧಾನ ಕಚೇರಿಯ 9 ಸಿಬ್ಬಂದಿಗೆ ಕೋವಿಡ್‌ ದೃಢಪಟ್ಟಿದೆ.

l ವಿಜಯನಗರ ಜಿಲ್ಲೆಯ ಹೊಸಪೇಟೆ ಹೊರವಲಯದ ಕಿತ್ತೂರು ರಾಣಿ ಚನ್ನಮ್ಮ ಶಾಲೆಯ 22 ವಿದ್ಯಾರ್ಥಿಗಳು, 6 ಜನ ಶಿಕ್ಷಕರಿಗೆ ಕೋವಿಡ್‌ ದೃಢಪಟ್ಟಿದ್ದು, ಶಾಲೆಯನ್ನು ಸೀಲ್‌ಡೌನ್‌ ಮಾಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು