ಬುಧವಾರ, ಆಗಸ್ಟ್ 10, 2022
24 °C

Covid-19 Karnataka Update| ಇಂದು 8244 ಸೋಂಕು ಪ್ರಕರಣ ಪತ್ತೆ, 119 ಮಂದಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ 8244 ಕೊರೊನಾ ವೈರಸ್‌ ಸೋಂಕು ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿವೆ. ಇದೇ ವೇಳೆ 119 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದ ಒಟ್ಟು ಸೋಂಕು ಪ್ರಕರಣ ಸಂಖ್ಯೆ 4,67,689ಕ್ಕೆ ಏರಿಕೆಯಾಗಿದ್ದರೆ, ಮೃತರ ಸಂಖ್ಯೆ 7384 ಆಗಿದೆ. 

ಈ 24 ಗಂಟೆಗಳಲ್ಲಿ 8865 ಮಂದಿ ಕೋವಿಡ್‌ನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿಯ ವರೆಗೆ 3,61,823 ಮಂದಿ ಕೋವಿಡ್‌ನಿಂದ ಗುಣಮುಖರಾದಂತಾಗಿದೆ. ಸದ್ಯ ರಾಜ್ಯದಲ್ಲಿ ಸಕ್ರಿಯವಾಗಿರುವುದು 98,463 ಪ್ರಕರಣಗಳು ಮಾತ್ರ.  800 ಮಂದಿ ಇನ್ನೂ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಬೆಂಗಳೂರಿನಲ್ಲಿ 24 ಗಂಟೆಗಳಲ್ಲಿ 2966 ಪ್ರಕರಣಗಳು ಪತ್ತೆಯಾಗಿದ್ದು,  37 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ನಗರದ ಕೋವಿಡ್‌ ಪ್ರಕರಣಗಳ ಸಂಖ್ಯೆ 1,73,628  ಆಗಿದೆ. ಇಲ್ಲಿ ಈ ವರೆಗೆ 2473 ಮಂದಿ ಮೃತಪಟ್ಟಿದ್ದಾರೆ. 

ಜಿಲ್ಲಾವಾರು ಮಾಹಿತಿ 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು