ಮಂಗಳವಾರ, ನವೆಂಬರ್ 24, 2020
19 °C

Covid-19 Karnataka Update| ರಾಜ್ಯದಲ್ಲಿಂದು 3014 ಪ್ರಕರಣಗಳು ಪತ್ತೆ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಇಂದು 3014 ಕೋವಿಡ್‌ ಪ್ರಕರಣ ವರದಿಯಾಗಿವೆ. ಅಲ್ಲದೆ, ಒಂದು ದಿನದ ಅವಧಿಯಲ್ಲಿ 28 ಮಂದಿ ಮೃತಪಟ್ಟಿದ್ದಾರೆ.

ಇದರೊಂದಿಗೆ ರಾಜ್ಯದ ಒಟ್ಟಾರೆ ಸೋಂಕು ಪ್ರಕರಣಗಳು 8,23,412 ಆಗಿದ್ದರೆ, 11,168 ಮಂದಿ ಕೊರೊನಾ ವೈರಸ್‌ಗೆ ಪ್ರಾಣ ತೆತ್ತಂತಾಗಿದೆ.

24 ಗಂಟೆಗಳಲ್ಲಿ ರಾಜ್ಯದಲ್ಲಿ ಒಟ್ಟು 7,468 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸಕ್ರಿಯಾಗಿರುವುದು 55,017 ಪ್ರಕರಣಗಳು ಮಾತ್ರ. ಇನ್ನು 956 ಮಂದಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 1,621 ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನ ಒಟ್ಟಾರೆ ಸೋಂಕಿತರ ಸಂಖ್ಯೆ 336469 ಆಗಿದೆ. ಬೆಂಗಳೂರಿನಲ್ಲಿ ಈ ವರೆಗೆ 3,864 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು